ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Karnataka Alpasankyatara Nigama)ಸ್ವಾವಲಂಬಿ ಸಾರಥಿ ಯೋಜನೆ,ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆ,ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ ಸೇರಿ ಒಟ್ಟು ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸಾಲ ಮತ್ತು ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯಡಿ(Alpasankyatara Nigama Yojane)ಸೌಲಭ್ಯವನ್ನು ಪಡೆಯಲು ಸಾರ್ವಜನಿಕರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಇನ್ನು ಕೇವಲ 10 ದಿನ ಮಾತ್ರ ಬಾಕಿ ಉಳಿದಿದ್ದು ಅರ್ಹ ಅರ್ಜಿದಾರರು ಕೂಡಲೇ ಈ ಅಂಕಣದಲ್ಲಿ ವಿವರಿಸಿರುವ ಸಂಪೂರ್ಣ ಮಾಹಿತಿಯನ್ನು ತಿಳಿದು ಅಗತ್ಯ ದಾಖಲೆಗಳನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆಯಬಹುದು.
Alpasankyatara Nigama Yojanegalu-ಅಲ್ಪಸಂಖ್ಯಾತ ನಿಗಮದಿಂದ ಯಾವೆಲ್ಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ?
ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಅಲ್ಪಸಂಖ್ಯಾತ ನಿಗಮದಿಂದ ಈ ಕೆಳಗಿನ ಪಟ್ಟಿಯಲ್ಲಿರುವ ಒಟ್ಟು 9 ಯೋಜನೆ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅರ್ಜಿದಾರರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು.
1) ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆ/Education Loan.
2) ಶ್ರಮಶಕ್ತಿ ಸಾಲ ಯೋಜನೆ/Shramshakti Sala.
3) ವೃತ್ತಿ ಪ್ರೋತ್ಸಾಹ ಸಾಲ ಯೋಜನೆ/Business Loan.
4) ಸ್ವಾವಲಂಬಿ ಸಾರಥಿ ಯೋಜನೆ/Swavalambi Sarati Yojane.
5) ಸಮುದಾಯ ಆಧಾರಿತ ತರಬೇತಿ ಯೋಜನೆ.
6) ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ/Business Loan Subsidy Scheme.
7) ಸಾಂತ್ವನ ಯೋಜನೆ.
8) ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ.
9) ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ/Swasaha Sanagha Sala Yojane.
Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ ವಿವಿಧ ಯೋಜನೆ ಅಡಿಯಲ್ಲಿ ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 16 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದೆ.
How To Apply-ಅರ್ಜಿ ಸಲ್ಲಿಸುವುದು ಹೇಗೆ?
ನಿಗಮದಿಂದ ಎಲ್ಲಾ ಯೋಜನೆ ಅಡಿಯಲ್ಲಿ ಲಾಭವನ್ನು ಪಡೆಯಲು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕಂಪ್ಯೂಟರ್ ಸೆಂಟರ್ ಅನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಈ ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಲ್ಲಿ ಸ್ವಂತ ಮನೆಯಲ್ಲೇ ಕುಳಿತು ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
Online Application Link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್- "Alpasankyatara Nigama Yojane Online Application"
Required Documents For Application-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನವನ್ನು ಪಡೆಯಲು ಬಹುಮುಖ್ಯವಾಗಿ ಅವಶ್ಯವಿರುವ ದಾಖಲೆಗಳ ಪಟ್ಟಿ ಹೀಗಿದೆ:
ಅಭ್ಯರ್ಥಿಯ ಆಧಾರ್ ಕಾರ್ಡ
ಬ್ಯಾಂಕ್ ಪಾಸ್ ಬುಕ್
ರೇಶನ್ ಕಾರ್ಡ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಪೋಟೋ
ಆಯಾ ಯೋಜನೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳು
Alpasankyatara Nigama Yojane Subsidy Amount-ಯೋಜನೆವಾರು ಎಷ್ಟು ಸಬ್ಸಿಡಿ ಮತ್ತು ಯಾವೆಲ್ಲ ಪ್ರಯೋಜನವನ್ನು ಪಡೆಯಬಹುದು?
1) ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆ:
ವಿದೇಶದಲ್ಲ ಪದವಿ ಅಥವಾ ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
2) ಶ್ರಮಶಕ್ತಿ ಸಾಲ ಯೋಜನೆ:
ಈ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತ ವರ್ಗದ ಕುಲಕಸುಬುದಾರರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ದಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ದಿಗೊಳಿಸುವ ಸಲುವಾಗಿ, ನಿಗಮದಿಂದ ಕಡಿಮೆ ಬಡ್ಡಿದರದಲ್ಲಿ ರೂ.50,000/- ಸಾಲಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ಇದರಲ್ಲಿ ಶೇ.50 ರಷ್ಟು ಸಾಲವನ್ನು ಮತ್ತು ಶೇ.50 ರಷ್ಟು ಸಹಾಯಧನವಾಗಿರುತ್ತದೆ.
3) ವೃತ್ತಿ ಪ್ರೋತ್ಸಾಹ ಸಾಲ ಯೋಜನೆ:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯನ್ನು 2025-26 ನೇ ಸಾಲಿನಲ್ಲಿ ವೃತ್ತಿ ಪ್ರೋತ್ಸಾಹ ಯೋಜನೆಯೊಂದಿಗೆ ಒಟ್ಟು 1,00,000/- ಸಾಲದೊಂದಿಗೆ ಬದಲಾಯಿಸಿದೆ. ಇದರಲ್ಲಿ 50% ಸಾಲ ಮತ್ತು 50% ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ.
4) ಸ್ವಾವಲಂಬಿ ಸಾರಥಿ ಯೋಜನೆ:
ಸದರಿ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು ಅಥವಾ ಗರಿಷ್ಠ ರೂ. 3,00,000/- ರ ವರೆಗೆ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು.
5) ಸಮುದಾಯ ಆಧಾರಿತ ತರಬೇತಿ ಯೋಜನೆ:
ನಿಗಮವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್‌ಸಿ, ಬಿಪಿಒಗಳು ಮತ್ತು ಇತರ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ ಹೆವಿ ವೆಹಿಕಲ್ ಡ್ರೈವಿಂಗ್, ಡ್ರೋನ್ ಚಾಲನ ತರಬೇತಿ , ಬ್ಯೂಟಿ ಪಾರ್ಲರ್ ಕೋರ್ಸ್ (ಪುರುಷ ಮತ್ತು ಮಹಿಳೆಯರಿಗೆ) ತರಬೇತಿಯನ್ನು ನೀಡುತ್ತದೆ.ಹೆಚ್ಚುವರಿಯಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ಆಧಾರಿತ ಕಲಿಕೆಯ ಕಾರ್ಯಕ್ರಮಗಳು (ಪ್ರಾಕ್ಟಿಕಮ್) ಸಹ ಲಭ್ಯವಿದೆ.
6) ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ:
ಈ ಯೋಜನೆಯಡಿಯಲ್ಲಿ ವ್ಯಾಪಾರ/ಉದ್ದಿಮೆ ಚಟುವಟಿಕೆ ಕೈಗೊಳ್ಳಲು ಬಯಸುವ ಫಲಾನುಭವಿಗಳಿಗೆ ಆಸ್ತಿಯ (ಕಟ್ಟಡ/ಭೂಮಿ) ಅಡಮಾನದ ಮೇಲೆ ಸಾಲವನ್ನು ಒದಗಿಸಲಾಗುತ್ತದೆ.
8) ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ:
ರೇಷ್ಮೆನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳನ್ನು ಪ್ರೋತ್ಸಾಹಿಸಿ ಅವರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವಸಲುವಾಗಿ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಅಗತ್ಯವಿರುವ ದುಡಿಮೆ ಬಂಡವಾಳ (working capital) ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸಲು ನಿಗಮದಿಂದ ರೂ 2.00ಲಕ್ಷದವರೆಗೆ ಸಾಲ ಸಹಾಯಧನ ಒದಗಿಸಲಾಗುವುದು. ಇದರಲ್ಲಿ ಶೇ.50 ಸಹಾಯಧನವಾಗಿರುತ್ತದೆ.
9) ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ:
ಅಲ್ಪಸಂಖ್ಯಾತ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿ ಮಾಡುವ ಸಲುವಾಗಿ, ರಾಷ್ಟೀಕೃತ/ಶೆಡ್ಯೂಲ್ ಬ್ಯಾಂಕ್/RBI ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕವೆಚ್ಚದ ಶೇ 50 ಅಥವಾ ಗರಿಷ್ಠ ರೂ 2.00 ಲಕ್ಷ ಸಹಾಯಧನವನ್ನು ನಿಗಮದಿಂದ ಒದಗಿಸಲಾಗುವುದು. ಸಹಾಯಧನವು ಬ್ಯಾಕ್‌ಎಂಡ್ ಸಬ್ಸಿಡಿಯಾಗಿದ್ದು ಸ್ವಸಹಾಯ ಸಂಘಗಳು ಆರ್ಥಿಕ ಬ್ಯಾಂಕ್‌ಗಳಿಂದ ಪಡೆದ ಸಾಲದ ಮರುಪಾವತಿಗೆ ಹೊಂದಾಣಿಕೆ ಮಾಡಲಾಗುತ್ತದೆ.