ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.
ಖಾಲಿ ಹುದ್ದೆಗಳ ವಿವರ:
ಪ್ರಥಮ ದರ್ಜೆ ಸಹಾಯಕ (ಪ್ರಥಮ ದರ್ಜೆ ನ್ಯಾಯಾಲಯ ಗುಮಾಸ್ತ/ ಕಂದಾಯ ನಿರೀಕ್ಷಕ) ಹುದ್ದೆಗಳಿಗೆ ಒಟ್ಟು 4 ಸೀಟುಗಳಿದ್ದು, ದ್ವಿತೀಯ ದರ್ಜೆ ಸಹಾಯಕರಿಗಾಗಿ ಒಟ್ಟು 14 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ.
ಅರ್ಹತಾ ವಿವರಗಳು:
ಶೈಕ್ಷಣಿಕ ಅರ್ಹತೆ: ಬಿಡಿಎ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಪದವಿ , ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 38 ವರ್ಷಗಳನ್ನು ಹೊಂದಿರಬೇಕು. 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಶುಲ್ಕ: 2A, 2B, 3A, 3B ಅಭ್ಯರ್ಥಿಗಳಿಗೆ 750 ರೂ. , SC/ST, ಮಾಜಿ ಸೇನಾ ಅಭ್ಯರ್ಥಿಗಳಿಗೆ 500 ರೂ. ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ (OMR), ದಾಖಲೆಗಳ ಪರಿಶೀಲನೆ, ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲನೆಯದಾಗಿ ಬಿಡಿಎ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.(HK_Kannada)
ಬಿಡಿಎ ಖಾಲಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಬಿಡಿಎ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿಯನ್ನು ಕ್ಯಾಪ್ಟರ್ ಮಾಡಿ ಇಟ್ಟುಕೊಳ್ಳಿ.