BPL Card: ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದೆಯೇ? ಮರಳಿ ಪಡೆಯುವುದೇಗೆ? ಇಲ್ಲಿದೆ ಗುಡ್‌ ನ್ಯೂಸ್‌

BPL Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಅಂತಹರನ್ನು ಎಪಿಎಲ್‌ಗೆ ವರ್ಗಾವಣೆ ಮಾಡುವ ಕೆಲಸ ಮುಂದಿವರೆದಿದೆ. ಈ ನಡುವೆಯೇ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ವೊಂದನ್ನು ನೀಡಿದೆ. ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸದ್ಯ ಇದೀಗ ರಾಜ್ಯದಲ್ಲಿ ಆಹಾರ ಇಲಾಖೆಯು, ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಅವರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ಮುಂದುವರೆದಿದೆ. ಇದಕ್ಕೆ ಇದೀಗ ವ್ಯಾಪಕ ಆಕ್ರೋಶಗಳು ಕೂಡ ವ್ಯಕ್ತವಾಗಿವೆ. ಅರ್ಹರನ್ನು ಸಹ ಎಪಿಎಲ್‌ಗೆ ಸೇರಿಸಲಾಗಿದೆ ಎನ್ನುವ ಆರೋಪಗಳು ಕೇಳಿಬಂದಿದೆ. ಇದರ ಬೆನ್ನಲ್ಲೇ ಸರ್ಕಾರ ಗುಡ್‌ ನ್ಯೂಸ್‌ವೊಂದನ್ನು ನೀಡಿದೆ.

Karnataka BPL Card Update Fake Cards Canceled Eligible Beneficiaries Can Reclaim

ಸಾಮಾನ್ಯವಾಗಿ ಬಿಪಿಎಲ್ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಅನರ್ಹರು ಸಹ ಈ ಕಾರ್ಡ್‌ ಪಡೆದು ಬಡವರ ಅನ್ನ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕಿತ್ತುಕೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ. ಇಂತಹವರಿಗೆ ಸರ್ಕಾರ ಕಡಿವಾಣ ಹಾಕುವ ಕೆಲಸವನ್ನು ಮುಂದುವರೆಸಿದೆ. ಜೊತೆಗೆ ಯಾರೆಲ್ಲಾ ಅರ್ಹರ ಕಾರ್ಡ್‌ಗಳನ್ನು ಎಪಿಎಲ್‌ ಆಗಿ ವರ್ಗಾಹಿಸಲಿದೆಯೋ ಅಂತಹವರು ಮತ್ತೆ ಬಿಪಿಎಲ್‌ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.

ಆಹಾರ ಇಲಾಖೆ ಸಲ್ಲಿಕೆ ಮಾಡಿದ್ದ ಪ್ರಸ್ತಾವಕ್ಕೆ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸುದ್ದಾರೆ. ರಾಜ್ಯದಲ್ಲಿ ಚಾಲ್ತಿಯಲ್ಲಿ ಇರುವ ಪಡಿತರ ಚೀಟಿಗಳ ಪೈಕಿ ಹಲವು ಕಾರಣಗಳಂದಾಗಿ 7,76,206 ಪಡಿತರ ಚೀಟಿಗಳು ಅನರ್ಹ ಎಂದು ಕೇಂದ್ರ ಸರ್ಕಾರ ಗುರುತಿಸಿದೆ. ರಾಜ್ಯ ಸರ್ಕಾರದ ಕುಟುಂಬ ತಂತ್ರಾಂಶದ ಪ್ರಕಾರ, 13,87,651 ಅನರ್ಹ ಪಡಿತರ ಚೀಟಿಗಳು ಎಂದು ತಿಳಿದುಬಂದಿದೆ.

ಅನರ್ಹ ಎನ್ನುವ ಕಾರಣಕ್ಕೆ ಎಪಿಎಲ್ ಪಡಿತರ ಚೀಟಿಯಾಗಿ ಪರಿವರ್ತಿಸಲಾಗಿದೆ. ಒಂದು ವೇಳೆ ನೀವೂ ಬಿಪಿಎಲ್‌ ಪಡಿತರ ಚೀಟಿ ಹೊಂದಲು ಅರ್ಹರಿದ್ದರೆ, 45 ದಿನಗಳ ಒಳಗೆ ಅಗತ್ಯ ದಾಖಲೆಗಳ ಸಹಿತ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ ಮಾಡಬೇಕು. ದಾಖಲೆ ಪರಿಶೀಲಿಸಿದ ನಂತರ, ಬಿಪಿಎಲ್ ರೇಷನ್‌ ಕಾರ್ಡ್‌ ಹೊಂದಲು ಅರ್ಹರಿದ್ದರೆ ಅಂತಹವರ ಬಿಪಿಎಲ್ ಪಡಿತರ ಚೀಟಿಯನ್ನು ಮರುಸ್ಥಾಪಿಸುವ ಪ್ರಸ್ತಾವಕ್ಕೂ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ.

ಅನರ್ಹರ ಬಳಿಯ ಬಿಪಿಎಲ್‌ ಪಡಿತರ ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತಿಸಿದ ನಂತರ ಯಾವುದೇ ಆಕ್ಷೇಪಣೆ ಸ್ವೀಕೃತ ಆಗದಿದ್ದರೆ, ಅಂತಹ ಪಡಿತರ ಚೀಟಿಗಳನ್ನು ಬಿಪಿಎಲ್‌ ಆಗಿಯೇ ಮುಂದುವರೆಸಲಾಗುವುದು ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಮೂಲಗಳ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಅರ್ಹ ಫಲಾನುಭವಿಗಳಿಗೆ ಹೊಸತಾಗಿ ಬಿಪಿಎಲ್ ಪಡಿತರ ಚೀಟಿ ವಿತರಣಡ ಮಾಡಲಾಗಿಲ್ಲ.

ಆದ್ದರಿಂದ ಅನರ್ಹ ಪಡಿತರ ಚೀಟಿಗಳನ್ನು ಎಪಿಎಲ್ ಪಡಿತರ ಚೀಟಿಯಾಗಿ ಪರಿವರ್ತಿಸಿದ ನಂತರ ಅಷ್ಟೇ ಸಂಖ್ಯೆಯ ಬಿಪಿಎಲ್ ಪಡಿತರ ಚೀಟಿಗಳನ್ನು ಹೊಸತಾಗಿ ಅರ್ಹ ಫಲಾನುಭವಿಗಳಿಗೆ ನೀಡುವುದು ಸೂಕ್ತ. ಈ ನಿರ್ಧಾರದಿಂದ ಯಾವುದೇ ಅರ್ಹ ಪಡಿತರ ಫಲಾನುಭವಿಗಳನ್ನು ಪಡಿತರ ಮುಖ್ಯ ವಾಹಿನಿಯಿಂದ ಹೊರಗೆ ಇಟ್ಟಂತೆ ಆಗುವುದಿಲ್ಲ ಎಂದು ಆಹಾರ ಇಲಾಖೆ ತನ್ನ ಪ್ರಸ್ತಾವದಲ್ಲಿ ತಿಳಿಸಿದೆ.

ಜೊತೆಗೆ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ ನಿಯಮದ ಪ್ರಕಾರ, ಕೈಗೊಳ್ಳುವ ಕುರಿತು ಆದೇಶ ಹೊರಡಿಸಲು ಆಹಾರ ಇಲಾಖೆ ನಿರ್ಧರಸಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ನೀವೂ ಅರ್ಹರಾಗಿದ್ದರೆ ನಿಮ್ಮನ್ನ ಎಪಿಎಲ್‌ಗೆ ವರ್ಗಾವಣೆ ಮಾಡಿದ್ದಲ್ಲಿ, ನಿಮ್ಮ ತಾಲ್ಲೂಕಿನ ತಾಹಶೀಲ್ದಾರ್ ಕಚೇರಿಗೆ ಹೋಗಿ ಮಾಹಿತಿ ನೀಡಬಹುದು. ಬಳಿಕ ನೀವು ಅರ್ಹರೆಂದು ತಿಳಿದುಬಂದರೆ ಮಾತ್ರ ಬಿಪಿಎಲ್‌ ಕಾರ್ಡನ್ನು ಮತ್ತೆ ಹಿಂತಿರುಗಿಸಲಾಗುವುದು ಎಂದು ಈ ಹಿಂದಿನಿಂದಲೂ ಸಹ ಸರ್ಕಾರವ ಹೇಳಿಕೊಂಡು ಬರುತ್ತಲಿದೆ.

Previous Post Next Post