ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಕಾರ್ಡ್ ವಿತರಿಸಲಾಗುತ್ತದೆ ಎಂದು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಅವರು ಹೇಳಿದರು. ಪಡಿತರ ಕಾರ್ಡ್ ಗಳು ಪರಿಷ್ಕರಣೆ ನಡೆಸಲಾಗಿತ್ತಿದ್ದು, ಅರ್ಹರು ಒಂದು ವೇಳೆ ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಯಾಗಿದ್ದರೆ ಸಂಬಂದಿಸಿದ ತಾಲ್ಲೂಕಿನಲ್ಲಿ ತಹಶಿಲ್ದಾರರಿಗೆ ಬೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಾಗುವುದು ಎಂದರು.
ದಸರಾ ಪ್ರಯುಕ್ತ ಸ್ಥಾಪಿಸಲಾಗಿರುವ ಆಹಾರ ಮಳಿಗೆಯ ವಸ್ತುಪ್ರದರ್ಶನವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿದ್ದು, ಆಹಾರ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಹಾಗೂ ಆಹಾರ ಸಚಿವ ಕೆಹೆಚ್. ಮುನಿಯಪ್ಪರವರು ಉದ್ಘಾಟಿಸಿ ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ ಮಾಡಲಾಗಿದ್ದು ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ ,ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನವನ್ನು ಮಾಡಲಾಗಿತ್ತು. ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದರು.
KH Muniyappa Response On The Revision Of The Eligibility Card From BPL To APL
ಇನ್ನೂ ರಾಜ್ಯದಲ್ಲಿನ ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯ ಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ, ಇನ್ನೂ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು
ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್ ಹಾಗೂ ಜಿಲ್ಲಾ ಜೆಂಟಿ ಉಪ ನಿರ್ದೇಶಕ ಮಂಟೇಸ್ವಾಮಿ ಹಾಗೂ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು