Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ(Scholarship Application),ಶುಲ್ಕ ಮರುಪಾವತಿ,ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ(Vidyasiri Yojana Application) ಅಡಿಯಲ್ಲಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗತ್ತಿರುವ 'ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ. "ಶುಲ್ಕ ಮರುಪಾವತಿ", ಮತ್ತು 'ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ", ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇಂದಿನ ಅಂಕಣದಲ್ಲಿ ಈ ಮೂರು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಈ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.

Last Date For SSP Scholarship-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು 31 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದೆ.

Who Can Apply For Scholarship-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ವಿದ್ಯಾರ್ಥಿಯು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ಪಿಯುಸಿ,ಡಿಪ್ಲೋಮಾ,ಪದವಿ,ಸ್ನಾತಕೋತ್ತರ ಪದವಿ,ತಾಂತ್ರಿಕ, ವೃತ್ತಿಪರ ಕೋರ್ಸ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಯು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿರುವ ಬರುವ ಪ್ರವರ್ಗ-1,ಅಲೆಮಾರಿ/ಅರೆಅಲೆಮಾರಿ ಕುಟುಂಬಕ್ಕೆ ಸೇರಿದವರಾಗಿರಬೇಕು.

ವಿದ್ಯಾರ್ಥಿಯ ಕುಟುಂಬದ ಆದಾಯವು ವರ್ಷಕ್ಕೆ ಪ್ರವರ್ಗ-1ಕ್ಕೆ ರೂ 2.5 ಲಕ್ಷ ಇತರೆ ವರ್ಗಗಳಿಗೆ ರೂ 1.0 ಲಕ್ಷದ ಒಳಗಿರಬೇಕು.

How To Apply for Vidyasiri Scholarship-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಕೆಳಗಿನ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇದಕ್ಕಾಗಿ ಕೆಳಗಿನಾ ಹಂತಗಳನ್ನು ಅನುಸರಿಸಿ.

Step-1: ವಿದ್ಯಾರ್ಥಿಗಳು ಪ್ರಥಮದಲ್ಲಿ ಇಲ್ಲಿ ಕ್ಲಿಕ್ "Vidyasiri Scholarship Online Application" ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಬಳಿಕ ಈ ಪೇಜ್ ನಲ್ಲಿ ಕೊನೆಯಲ್ಲಿ ಗೋಚರಿಸುವ "Online Application" ಕಾಲಂ ಮುಂದೆ ಇರುವ "Click here to Apply" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ನಂತರ ಈ ಪುಟದಲ್ಲಿ "2025-26ನೇ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ" ಬಟನ್ ಮೇಲೆ ಕ್ಲಿಕ್ ಮಾಡಿ ಮೊದಲ ಬಾರಿಗೆ ಈ ವೆಬ್ಸೈಟ್ ಭೇಟಿ ಮಾಡುತ್ತಿರುವವರು ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಂಡು ಲಾಗಿನ್ ಅಗಬೇಕು.

Step-4: ಲಾಗಿನ್ ಅದ ಬಳಿಕ ಅರ್ಜಿ ನಮೂನೆ ತೆರೆದಿಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ.

Documents For Scholarship Application-ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳ ಪಟ್ಟಿ ಹೀಗಿದೆ:

ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳು ಅಗತ್ಯವಾಗಿ ಒದಗಿಸಬೇಕಾದ ದಾಖಲೆಗಳು:

ವಿದ್ಯಾರ್ಥಿಯ ಆಧಾರ್ ಕಾರ್ಡ.

ಬ್ಯಾಂಕ್ ಪಾಸ್ ಬುಕ್.

ಪೋಟೋ.

ಶಾಲಾ ವ್ಯಾಸಂಗ ಪ್ರಮಾಣ ಪತ್ರ.

ಪೋಷಕರ ಆದಾಯ ಮತ್ತು ಜಾತಿ ಪ್ರಮಾಣ ಪತ್ರ.

ಮೊಬೈಲ್ ನಂಬರ್ ಮತ್ತು ಮೇಲ್ ಐಡಿ.

Important links 

Helpline Number- ಸಹಾಯವಾಣಿ ಸಂಖ್ಯೆ: 8050770005

BCWD Official Website-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್-Click Here

Official Notification-ಅಧಿಕೃತ ಪ್ರಕಟಣೆ ಪ್ರತಿ-Download Now

Previous Post Next Post