ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, 1 ಲಕ್ಷ ರೂ. ಸಹಾಯಧನ: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ರೇಷ್ಮೆನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ರಾಜ್ಯದ ಅಲ್ಪಸಂಖ್ಯಾತರನ್ನು ಪ್ರೋತ್ಸಾಹಿಸಲು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವ ಸಲುವಾಗಿ ಅಗತ್ಯವಿರುವ ದುಡಿಮೆ ಬಂಡವಾಳ (working capital) ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸಲು ನಿಗಮದಿಂದ 2 ಲಕ್ಷರೂ.ವರೆಗೆ ಸಾಲ ನೀಡಲಾಗುವುದು. ಇದರಲ್ಲಿ ಶೇ. ಸಹಾಯಧನವನ್ನು

ಒದಗಿಸಲಾಗುವುದು. ಸದರಿ ಯೋಜನೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KMDC ಅಧಿಕೃತ ಜಾಲತಾಣ https://kmdconline.karnataka.gov.in/Portal/home & ಭೇಟಿ ನೀಡಿ, ಅಕ್ಟೋಬರ್ 16 ರೊಳಗೆ ಆನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - ಅಕ್ಟೋಬರ್ 16,2025

ವಯೋಮಿತಿ:

ಕನಿಷ್ಠ ವಯಸ್ಸಿನ ಮಿತಿ - 18 ವರ್ಷಗಳು 

ಗರಿಷ್ಠ ವಯಸ್ಸಿನ ಮಿತಿ - 55 ವರ್ಷಗಳು

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

ಅರ್ಜಿದಾರ ಅಲ್ಪಸಂಖ್ಯಾತರಾಗಿರಬೇಕು.

ಅರ್ಜಿದಾರ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರನ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷರೂ. ಗಳ ಮಿತಿಯಲ್ಲಿರಬೇಕು.

ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರು ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರಿಯಲ್ಲಿರಬಾರದು. 

ಅರ್ಜಿದಾರರ ಅಥವಾ ಅವರ ಕುಟುಂಬದ ಸದಸ್ಯರು (ಅರಿವು ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ) ಕಳೆದ 5 ವರ್ಷಗಳಲ್ಲಿ ನಿಗಮದಿಂದ ಯಾವುದೇ ಸಾಲ ಸಹಾಯಧನ ಸೌಲಭ್ಯ ಪಡೆದಿರಬಾರದು. 

ಅರ್ಜಿದಾರರು ನಿಗಮದ ಸುಸ್ಥಿದಾರರಾಗಿರಬಾರದು.

ಯೋಜನೆಯಡಿ ಸೀಗುವ ಸಾಲ ಸೌಲಭ್ಯದ ಮಾಹಿತಿ:

ನಿಗಮದಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ 2 ಲಕ್ಷ ರೂ. ವರೆಗೆ ಸಾಲವನ್ನು ನೀಡಲಾಗುತ್ತದೆ. ಇದರಲ್ಲಿ 50% ರಷ್ಟು ಸಾಲ ಮತ್ತು 50%ರಷ್ಟು ಸಹಾಯಧನ ಆಗಿರುತ್ತದೆ. ಅಂದರೆ 1 ಲಕ್ಷ ಸಾಲ, 1 ಲಕ್ಷ ಸಹಾಯಧನ.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:

ಫಲಾನುಭವಿಗಳ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರ

ಫಲಾನುಭವಿಗಳ ಚಾಲ್ತಿಯಲ್ಲಿರುವ ಅಲ್ಪಸಂಖ್ಯಾತ ಪ್ರಮಾಣ ಪತ್ರ

ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರ

ಫಲಾನುಭವಿಗಳ ಆಧಾರ್ ಕಾರ್ಡ್ ಪ್ರತಿ ಫಲಾನುಭವಿಯ ಬ್ಯಾಂಕ್ ಬುಕ್ ಪ್ರತಿ

ಯೋಜನಾ ವರದಿ

ರೀಲರ್ ಪರವಾನಗಿ

ಸ್ವಯಂ ಘೋಷಣೆ ಪತ್ರ (ಸ್ವಯಂ ಘೋಷಣೆ ಪತ್ರ ಡೌನ್ಸ್‌ಡ್ ಮಾಡುವ ಲಿಂಕ್) -

https://kmdconline.karnataka.gov.in/API/ProjectFiles/DocumentTypes/SampleDoc 20-Jul-2024_10-42-33.pdf

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ ಸಲ್ಲಿಕೆ ಹೇಗೆ?

ಮೊದಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ https://kmdconline.karnataka.gov.in/Portal/home ಗೆ ಭೇಟಿ ನೀಡಿ.

“ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ವಿವಿಧ ಯೋಜನೆಗಳು (2025-26)” ವಿಭಾಗದ ಕೆಳಗೆ ನೀಡಲಾಗಿರುವ - ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಆಯ್ಕೆಯ ಮೇಲೆ ಟ್ಯಾಪ್ ಮಾಡಿ.

ನಂತರ “ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬಳಿಕ ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ಮೂಲಕ ಕಳುಹಿಸಲಾಗುವ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ,

ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.

ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

ನಂತರ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಸ್‌ಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

DOM Silk Reeling and Spinning Subsidy Scheme Online Application Form 2025-26 :-Apply Now

Official Website:-dom.karnataka.gov.in

Previous Post Next Post