ರಾಜ್ಯದ `SSLC' ವಿದ್ಯಾರ್ಥಿಗಳ ಗಮನಕ್ಕೆ : `ಪರೀಕ್ಷೆ-1'ರ ನೋಂದಣಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಕರ್ನಾಟಕ ರಾಜ್ಯದ ಬೆಂಗಳೂರಿನಿಂದ ಒಂದು ಪ್ರಮುಖ ಸುದ್ದಿ! ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ರ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ಗೆ ಸಂಬಂಧಿಸಿದಂತೆ ನೋಂದಣಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಲೇಖನವು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಒದಗಿಸುತ್ತದೆ, ಇದರಲ್ಲಿ ನೋಂದಣಿ ಪ್ರಕ್ರಿಯೆ, ಶುಲ್ಕ ವಿವರಗಳು, ವಿನಾಯಿತಿಗಳು ಮತ್ತು ಪ್ರಮುಖ ಷರತ್ತುಗಳನ್ನು ಒಳಗೊಂಡಿದೆ. ಈ ಮಾಹಿತಿಯು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಉಪಯುಕ್ತವಾಗಿದೆ ಇಲಾಖೆಯ ಅಧಿಕೃತ ಪ್ರತಿಗಳು ಲೇಖನದ ಕೊನೆಯ ಭಾಗದಲ್ಲಿವೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಗೆ ಹಾಜರಾಗಲು, ವಿದ್ಯಾರ್ಥಿಗಳು ಕನಿಷ್ಠ 75% ಹಾಜರಾತಿಯನ್ನು ಶಾಲೆಯಲ್ಲಿ ಕಡ್ಡಾಯವಾಗಿ ಹೊಂದಿರಬೇಕು. ಈ ಷರತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವರ್ಷದಲ್ಲಿ ನಿಯಮಿತವಾಗಿ ಶಾಲೆಗೆ ಹಾಜರಾಗುವಂತೆ ಖಚಿತಪಡಿಸಿಕೊಳ್ಳಲು ಜಾರಿಗೊಳಿಸಲಾಗಿದೆ. ಒಂದು ವೇಳೆ ವಿದ್ಯಾರ್ಥಿಯೊಬ್ಬರು ಈ ಶೇಕಡಾವಾರು ಹಾಜರಾತಿಯನ್ನು ಪೂರೈಸದಿದ್ದರೆ, ಅವರಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶವಿರುವುದಿಲ್ಲ. ಆದರೆ, ವೈದ್ಯಕೀಯ ಕಾರಣಗಳಿಂದ ಅಥವಾ ಇತರ ಅನಿವಾರ್ಯ ಕಾರಣಗಳಿಂದ ಹಾಜರಾತಿ ಕಡಿಮೆಯಾದರೆ, ಶಾಲೆಯು ಸೂಕ್ತ ದಾಖಲೆಗಳೊಂದಿಗೆ ಮಂಡಳಿಗೆ ಅರ್ಜಿ ಸಲ್ಲಿಸಬಹುದು.

2026ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2026ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF) ವಿವರಗಳನ್ನು ಮಂಡಳಿಯ https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್ ಲೋಡ್ ಮಾಡಲು ಕೆಳಕಂಡಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ವಿದ್ಯಾರ್ಥಿಗಳ ನೋಂದಣಿಗೆ ಅಗತ್ಯವಿರುವ ಮಾಹಿತಿಗಳನ್ನು ಸಂಗ್ರಹಿಸಿಕೊಂಡು ನಿಗಧಿಪಡಿಸಿದ ದಿನಾಂಕದಲ್ಲಿ ಶಾಲಾ ಲಾಗಿನ್ನಲ್ಲಿ ವಿದ್ಯಾರ್ಥಿಗಳ ನೋಂದಣಿಯನ್ನು ಮಾಡುವುದು.

ಈ ಸಾಲಿನಿಂದ ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಯನ್ನು ನೇರವಾಗಿ ಅಭ್ಯರ್ಥಿಗಳೇ ಮಂಡಲಿ ಜಾಲತಾಣದಲ್ಲಿ ನೋಂದಾಯಿಸಬಹುದಾಗಿದ್ದು, ಈ ಕುರಿತ ಮಾರ್ಗಸೂಚಿಯನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.

ಖಾಸಗಿ ಪ್ರೌಢಶಾಲೆಗಳ ನೋಂದಣಿ ಮತ್ತು ಮಾನ್ಯತೆ :-

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ- 1966 Chapter VI -ನಿಯಮ 36 ಮತ್ತು 37ರನ್ವಯ ಮಾನ್ಯತೆ ಪಡೆದ ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಾತ್ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಾಯಿಸಲು ಅವಕಾಶವಿರುತ್ತದೆ.

ಕರ್ನಾಟಕ ಶಿಕ್ಷಣ ಕಾಯ್ದೆ-1983 ನಿಯಮ-30, 31, 33, 36 ಹಾಗೂ 38 ರನ್ವಯ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆಗಳು ನೋಂದಣಿ ಮತ್ತು ಮಾನ್ಯತೆಯನ್ನು ಕಡ್ಡಾಯವಾಗಿ ಪಡೆದಿರಬೇಕು ಹಾಗೂ ಪ್ರೌಢಶಾಲೆಯಲ್ಲಿ ಬೋಧನೆ ಮಾಡುವ ಮಾಧ್ಯಮಗಳಿಗನುಗುಣವಾಗಿ ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆಯು ನವೀಕರಣವಾಗಿರಬೇಕು. 2025-26ನೇ ಸಾಲಿನ ಮಾನ್ಯತೆ ನವೀಕರಣವನ್ನು ಸಕ್ಷಮ ಪ್ರಾಧಿಕಾರದಿಂದ ಸಕಾಲದಲ್ಲಿ ಪಡೆದುಕೊಳ್ಳುವುದು.


Previous Post Next Post