Muthoot Finance Scholarship-ಮುತ್ತೊಟ್ ಫೈನಾನ್ಸ್ ನಿಂದ ₹2.40 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವನ್ನು ಒದಗಿಸಲು ಮುತ್ತೊಟ್ ಫೈನಾನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನವನ್ನು(Muthoot Finance Scholarship-2025) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

ಭಾರತದಲ್ಲಿರುವ ವಿವಿಧ ಕಂಪನಿಯ CSR ಅನುದಾನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿವೇತನವನ್ನು(Scholarship Application) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ ಈ ನಿಟ್ಟಿನಲ್ಲಿ ಪ್ರಸ್ತುತ ಮುತ್ತೊಟ್ ಫೈನಾನ್ಸ್ ಸಂಸ್ಥೆಯಿಂದ ವಿವಿಧ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಮುತ್ತೊಟ್ ಫೈನಾನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನವನ್ನು(Muthoot Finance Scholarship Application)ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಮುತ್ತೊಟ್ ಫೈನಾನ್ಸ್ ಸಂಸ್ಥೆಯಿಂದ ಎಷ್ಟು ವಿದ್ಯಾರ್ಥಿವೇತನ ನೀಡಲಾಗುತ್ತದೆ? ಇತ್ಯಾದಿ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Muthoot Finance Scholarship Eligibility-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳ ವಿವರ ಹೀಗಿದೆ:

ಮುತ್ತೊಟ್ ಫೈನಾನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಸಂಸ್ಥೆಯಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪಟ್ಟಿ ಈ ಕೆಳಗಿನಂತಿವೆ.

ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು.

ಅರ್ಜಿದಾರ ವಿದ್ಯಾರ್ಥಿಯು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ 90% ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು.

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.0 ಲಕ್ಷ ಮೀರಿರಬಾರದು.

ವಿದ್ಯಾರ್ಥಿಯು ನಿಗದಿಪಡಿಸಿರುವ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.

Muthoot Finance Scholarship Amount-ಎಷ್ಟು ವಿದ್ಯಾರ್ಥಿವೇತನ ನೀಡಲಾಗುತ್ತದೆ?

ಮುತ್ತೊಟ್ ಫೈನಾನ್ಸ್ ನಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಒದಗಿಸಲಾಗುವ ವಿದ್ಯಾರ್ಥಿವೇತನದ ಮೊತ್ತದ ವಿವರ ಈ ಕೆಳಗಿನಂತಿದೆ:

MBBS ವಿದ್ಯಾರ್ಥಿಗಳಿಗೆ- ₹ 2,40,000/-

B.Tech ವಿದ್ಯಾರ್ಥಿಗಳಿಗೆ- ₹ 1,20,000/-

B.Sc Nursing ವಿದ್ಯಾರ್ಥಿಗಳಿಗೆ- ₹ 1,20,000/-

Last Date For Application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ನವೆಂಬರ್ 2025

Muthoot Finance Scholarship Online Application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ:

ಅರ್ಹ ವಿದ್ಯಾರ್ಥಿಗಳು ಅಂತಿಮ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಕೆಳಗಿನ ವಿಧಾನವನ್ನು ಅನುಸರಿಸಿ ಆನ್ಲೈನ್ ಮೂಲಕ ತಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Step-1: ಮೊದಲಿಗೆ ಇಲ್ಲಿ ಕ್ಲಿಕ್ "Apply Now" ಮಾಡಿ ಅಧಿಕೃತ ಮುತ್ತೊಟ್ ಫೈನಾನ್ಸ್ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಈ ಪುಟದಲ್ಲಿ "New Student? Register Here" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಪೂರ್ಣ ಹೆಸರು, ಮೇಲ್ ವಿಳಾಸ, ಮೊಬೈಲ್ ನಂಬರ್, ಹುಟ್ಟಿದ ದಿನಾಂಕ ಇತ್ಯಾದಿ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Register" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನೋಂದಣಿಯನ್ನು ಮಾಡಿಕೊಳ್ಳಿ.

Step-3: ಬಳಿಕ ಲಾಗಿನ್ ಪೇಜ್ ಭೇಟಿ ಮಾಡಿ ಇಲ್ಲಿ ಬಳಕೆದಾರ ಐಡಿ ಮತ್ತು ಪಾಸ್ವರ್ಡ್ ಅನ್ನು ಹಾಕಿ ಲಾಗಿನ್ ಅದರೆ ಅಧಿಕೃತ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಎಲ್ಲಾ ವಿವರ ಮತ್ತು ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.

Required Documents-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಹಾಕಲು ಅಗತ್ಯವಾಗಿ ಬೇಕಾಗುವ ದಾಖಲೆಗಳ ವಿವರ ಈ ಕೆಳಗಿನಂತಿದೆ:

ವಿದ್ಯಾರ್ಥಿಯ ಆಧಾರ್ ಕಾರ್ಡ/Adhar Card

ಬ್ಯಾಂಕ್ ಪಾಸ್ ಬುಕ್/Bank Pass Book

ಪಾನ್ ಕಾರ್ಡ/Pan Card

ವ್ಯಾಸಂಗ ಪ್ರಮಾಣ ಪತ್ರ/Study Certificate

ಅಂಕಪಟ್ಟಿ/Marks card

ಮೊಬೈಲ್ ನಂಬರ್/Mobile Number



Previous Post Next Post