ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ವತಿಯಿಂದ 2025-2026 ನೇ ಸಾಲಿನ ನಿಕಾನ್ ವಿದ್ಯಾರ್ಥಿವೇತನ(Nikon scholarship 2025 India) ಕಾರ್ಯಕ್ರಮದ ಅಡಿಯಲ್ಲಿ ಛಾಯಾಗ್ರಹಣ ಸಂಬಂಧಿತ ಕೋರ್ಸ್ ನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 1 ಲಕ್ಷ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ವಿದ್ಯಾರ್ಥಿವೇತನ ಯೋಜನೆಯ ಮುಖ್ಯ ಉದ್ದೇಶವು ಸೃಜನಶೀಲ ಪ್ರತಿಭೆಯನ್ನು ಉತ್ತೇಜಿಸಿ, ಅವರ ಕೌಶಲ್ಯಗಳನ್ನು(Nikon India scholarship) ಮತ್ತಷ್ಟು ವಿಕಸನಗೊಳಿಸುವುದಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಗಳಿಲ್ಲದೆ ವೃತ್ತಿಪರ ಛಾಯಾಗ್ರಹಣ ಕೋರ್ಸ್‌ಗಳನ್ನು ಕಲಿಯಲು ಅವಕಾಶ ನೀಡುವುದೇ ಇದರ ಮುಖ್ಯ ಉದ್ದೇಶವಾಗಿದೆ.
ಈ ಯೋಜನೆ ಮೂಲಕ ನಿಕಾನ್ ಸಂಸ್ಥೆ ಯುವ ದೃಶ್ಯ ಕಥೆಗಾರರ ಶಿಕ್ಷಣವನ್ನು ಬೆಂಬಲಿಸುವುದರೊಂದಿಗೆ, ಅವರು ಆತ್ಮವಿಶ್ವಾಸದಿಂದ(Nikon India student scholarship) ತಮ್ಮ ಆಸಕ್ತಿಯನ್ನು ವೃತ್ತಿಯನ್ನಾಗಿ ರೂಪಿಸಿಕೊಳ್ಳಲು ಪ್ರೇರಣೆ ನೀಡುತ್ತದೆ.
ಪ್ರಸ್ತುತ ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ಅರ್ಹರಿರುತ್ತಾರೆ? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಯಾವೆಲ್ಲ ಹಂತಗಳನ್ನು ಅನುಸರಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಈ ಕಾರ್ಯಕ್ರಮದ ಅಡಿಯಲ್ಲಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
Who Can APply For Scholorship-ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು?
ಅರ್ಜಿದಾರರ ಅಭ್ಯರ್ಥಿಯು ಭಾರತದ ಖಾಯಂ ಪ್ರಜೆಯಾಗಿರಬೇಕು.
ಅಭ್ಯರ್ಥಿಯು ಪ್ರಸ್ತುತ ವೃತ್ತಿಪರ ಛಾಯಾಗ್ರಹಣ ಸಂಬಂಧಿತ ಕೋರ್ಸ್ (ಕನಿಷ್ಠ 3 ತಿಂಗಳ ಅವಧಿ) ಕಲಿತಿರಬೇಕು.
ಅಭ್ಯರ್ಥಿಯು ದ್ವಿತೀಯ ಪಿಯುಸಿ ಯನ್ನು ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 6,00,000 ಮೀರಿರಬಾರದು.
ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಬುಡ್ಡಿ4 ಸ್ಟುಡಿ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
Last Date For Apply-ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 28 ನವೆಂಬರ್ 2025
Scholorship Amoubt-ಈ ಯೋಜನೆಯಡಿ ಎಷ್ಟು ವಿದ್ಯಾರ್ಥಿವೇತನವನ್ನು ಪಡೆಯಬಹುದು?
ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಅಡಿಯಲ್ಲಿ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ 1,00,000 ರೂಪಾಯಿಗಳವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ: ವಿದ್ಯಾರ್ಥಿವೇತನದ ಮೊತ್ತವು ವಿದ್ಯಾರ್ಥಿಯು ಸಲ್ಲಿಸುವ ನಿಜವಾದ ಶುಲ್ಕ ರಚನೆಯನ್ನು ಆಧರಿಸಿರುತ್ತದೆ.
Documents Required-ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳಾವುವು?
ಅಭ್ಯರ್ಥಿಯ ಆಧಾರ್ ಕಾರ್ಡ/Aadhar Card
ಅಭ್ಯರ್ಥಿಯ ದ್ವಿತೀಯ ಪಿಯುಸಿ ಅಂಕಪಟ್ಟಿ/PUC Markscard
ಇತ್ತೀಚೆಗೆ ಪೂರ್ಣಗೊಂಡ ಕೋರ್ಸ್‌ನ ಅಂಕಪಟ್ಟಿ/Cource Markscard
ಪ್ರಸ್ತುತ ವರ್ಷದ ಪ್ರವೇಶ ಶುಲ್ಕ ರಶೀದಿ/Current year's admission fee receipt
ಆದಾಯ ಪ್ರಮಾಣಪತ್ರ/Income Cetificate
ಬ್ಯಾಂಕ್ ಪಾಸ್ ಪುಸ್ತಕ/Bank Passbook
ಫೋಟೊ/Photocopy
Online Application Process-ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನ:
ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಅಡಿಯಲ್ಲಿ ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
Step-1: ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಮೊದಲಿಗೆ ಈ ಲಿಂಕ್ "Online Application" ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.
Step-2: ತದನಂತರ ಅದೇ ಪುಟದಲ್ಲಿ ಕಾಣುವ ನಿಕಾನ್ ವಿದ್ಯಾರ್ಥಿವೇತನ ಆಯ್ಕೆಯ ಮುಂದೆ ಕಾಣಿಸುವ "Apply Now" ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: ನಂತರ "Not Registered Yet ? Create an account" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಎಲ್ಲಾ ವಿವರವನ್ನು ಭರ್ತಿ ಮಾಡಿ User Id ಮತ್ತು Password ಅನ್ನು ಸಿದ್ದ ಮಾಡಿಕೊಂಡು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಆಗಬೇಕು.
Step-4: ತದನಂತರ ಅರ್ಜಿ ನಮೂನೆಯು ಓಪನ್ ಆಗುತ್ತದೆ ಅಲ್ಲಿ ಕೇಳುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ಸಲ್ಲಿಕೆಯು ಪೂರ್ಣಗೊಳ್ಳುತ್ತದೆ.