ರಾಜ್ಯದ ಜನತೆಗೆ ಎಲ್ಲರಿಗೂ ನಮಸ್ಕಾರಗಳು, ಈ ಒಂದು ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವಂತಹ ಪ್ರಮುಖವಾದ ವಿಷಯವೇನೆಂದರೆ, ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆ ಇರುವಂತಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನದ ಪ್ರಯೋಜನ ಪಡೆಯಬಹುದಾಗಿದೆ.
ವಿದ್ಯಾಸಿರಿ ವಿದ್ಯಾರ್ಥಿ ವೇತನ (Vidyasiri Scholarship)
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಎಸ್ ಎಸ್ ಪಿ ಪೋರ್ಟಲ್ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಈ ಒಂದು ವಿದ್ಯಾರ್ಥಿ ವೇತನದ ಪ್ರಯೋಜನವನ್ನು ನೀಡಲಾಗುತ್ತದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ SSP ಪೋರ್ಟಲ್ ನಲ್ಲಿ ಅವಕಾಶವನ್ನು ನೀಡಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆ ಇರುವಂತಹ ವಿದ್ಯಾರ್ಥಿಗಳು ಈ ಲೇಖನವನ್ನು ಪೂರ್ತಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅರ್ಹತೆಗಳು:
ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಆಗಿರಬೇಕು.
ಹಿಂದುಳಿದ ವರ್ಗಗಳ ಯಾವುದೇ ವಿದ್ಯಾರ್ಥಿಯು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ರಾಜ್ಯದ ಮಾನ್ಯತೆ ಪಡೆದ ಯಾವುದೇ ವಿದ್ಯಾ ಸಂಸ್ಥೆಯಿಂದ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಜ್ಯದ ಪ್ರತಿಯೊಬ್ಬ ಹಿಂದುಳಿದ ವರ್ಗಗಳ ವಿದ್ಯಾರ್ಥಿಯು ಈ ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ವಿದ್ಯಾರ್ಥಿಯ ಆಧಾರ್ ಕಾರ್ಡ್
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಹಿಂದಿನ ವರ್ಷದ ಅಂಕಪಟ್ಟಿ
ವಿದ್ಯಾರ್ಥಿಯ ಹಾಸ್ಟೆಲ್ ವಿವರಗಳು (ಇದ್ದಲ್ಲಿ)
ಮೊಬೈಲ್ ನಂಬರ್ & ಇಮೇಲ್ ಐಡಿ
ಅರ್ಜಿ ಸಲ್ಲಿಸುವುದು ಹೇಗೆ?
ವಿದ್ಯಾರ್ಥಿಯ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಆನ್ಲೈನ್ ನಲ್ಲಿ ಎಸ್ ಎಸ್ ಪಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವಂತಹ ನೇರವಾದ ಲಿಂಕ್ ಈ ಕೆಳಗಡೆ ನೀಡಲಾಗಿರುತ್ತದೆ ಅದನ್ನು ಬಳಸಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:
https://ssp.postmatric.karnataka.gov.in/
ಮೇಲೆ ನೀಡಿರುವಂತಹ ಜಾಲತಾಣವನ್ನು ಬಳಸಿ ವಿದ್ಯಾರ್ಥಿ ವೇತನಕ್ಕೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ನಿಮಗೆ ಅರ್ಜಿ ಸಲ್ಲಿಸಲು ತಿಳಿದಿದ್ದಲ್ಲಿ ನಿಮ್ಮ ಹತ್ತಿರವಿರುವ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯದ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.