ಕ್ರಿಸ್‌ಮಸ್‌ಗೆ ರಾಜ್ಯಾದ್ಯಂತ 1,000ಕ್ಕೂ ಹೆಚ್ಚು ವಿಶೇಷ KSRTC ಬಸ್‌ಗಳ ಸಂಚಾರ

ಕ್ರಿಸ್‌ಮಸ್ (Christmas) ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ 1000ಕ್ಕೂ ಹೆಚ್ಚು ವಿಶೇಷ ಕೆಎಸ್‌ಆರ್‌ಟಿಸಿ (KSRTC) ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಇಂದಿನಿಂದ ಡಿ.28ರವರೆಗೆ ಸಂಚರಿಸಲಿವೆ.

ಕ್ರಿಸ್‌ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಬೇಡಿಕೆ ಹೆಚ್ಚಾಗಿದ್ದು, ರಾಜ್ಯಾದ್ಯಂತ 1,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಡಿ.19, ಡಿ.20 ಹಾಗೂ ಡಿ.24ರಂದು ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಮಂಗಳೂರು, ಉಡುಪಿ, ಮಡಿಕೇರಿ, ಹಾಸನ, ಮೈಸೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಕಲಬುರಗಿ, ರಾಯಚೂರು, ಬೀದರ್ ಸೇರಿದಂತೆ ಹಲವು ನಗರಗಳಿಗೆ ಬಸ್ ಸಂಚಾರ ಇರಲಿದೆ. ಡಿ.26 ಹಾಗೂ 28ರಂದು ಬೇರೆ ಬೇರೆ ಊರುಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಸೌಲಭ್ಯ ಮಾಡಲಾಗಿದೆ.ಇದನ್ನೂ ಓದಿ: ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌

ಹಬ್ಬದ ಅವಧಿಯಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯ ದರಗಳೇ ಅನ್ವಯವಾಗಲಿದ್ದು, ಯಾವುದೇ ವಿಶೇಷ ಹಬ್ಬದ ದರ ಇಲ್ಲ. ಇನ್ನೂ ಅಗತ್ಯವಿದ್ದಲ್ಲಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸುವ ವ್ಯವಸ್ಥೆ ಮಾಡಲಾಗುವುದು ನಿಗಮ ಮಾಹಿತಿ ನೀಡಿದೆ

Previous Post Next Post