ಬೆಳೆ ಪರಿಹಾರ ಹಣ ಜಮೆಯಾಗಿಲ್ಲವೇ? ರೈತರೇ ಈ ಕೆಲಸ ಮಾಡಿ

Beleparihara not yet credited : ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿ ಹಾನಿಯಿಂದ ಹಾಳಾದ ಬೆಳೆಗಳಿಗೆ ರಾಜ್ಯ ಸರ್ಕಾರ ಪರಿಹಾರ ಹಣ ಘೋಷಿಸಿದ್ದು, ವಿವಿಧ ತಾಂತ್ರಿಕ ಕಾರಣದಿಂದ ಪರಿಹಾರ ಹಣ ಪಾವತಿ ವಿಫಲಗೊಂಡಿದ ಪ್ರಕರಣಗಳಲ್ಲಿ ಸಂಬಂಧಪಟ್ಟ ರೈತರು ರೈತ ಸಂಪರ್ಕ ಕೇಂದ್ರ ಮತ್ತು ಬ್ಯಾಂಕ್‌ಗಳಿಗೆ ಭೇಟಿ ನೀಡಿ ತಾಂತ್ರಿಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ವಿವಿಧ ಕಾರಣಗಳಿಂದ 12,313 ಪ್ರಕರಣದಲ್ಲಿ ಪರಿಹಾರ ಹಣ ಪಾವತಿ ವೈಫಲ್ಯವಾಗಿದ್ದು, ಇಂತಹ ರೈತರ ಪಟ್ಟಿಯನ್ನು ಸಂಬಂಧಪಟ್ಟ ಗ್ರಾಮಗಳ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಕಚೇರಿಗಳ ಸೂಚನಾ ಫಲಕಗಳಲ್ಲಿ ಪಟ್ಟಿ ಪ್ರಕಟಿಸಿದ್ದ ಪರಿಣಾಮ ಇದೂವರೆಗೆ 3,860 ರೈತರು ಸಮಸ್ಯೆ ಸರಿಪಡಿಸಿಕೊಂಡಿದ್ದು, ಇನ್ನುಳಿದಂತೆ 8,464 ರೈತರು ಸಮಸ್ಯೆ ಸರಿಪಡಿಸಿಕೊಂಡಿರುದಿಲ್ಲ.

ಫ್ರೂಟ್ಸ್ ತಂತ್ರಾcಶ ಹಾಗೂ ಆಧಾರ್‌ನಲ್ಲಿ ಹೆಸರು ಹೊಂದಾಣಿಕೆಯಲ್ಲಿ ಸಮಸ್ಯೆಯಿಂದ 1,549 ರೈತರಿಗೆ ಪರಿಹಾರ ಹಣ ಪಡೆಯಲು ಸಾಧ್ಯವಾಗಿಲ್ಲ. ಇಂತಹ ರೈತರು ಕೂಡಲೇ ಸಂಬಂಧಪಟ್ಟ ರೈತಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅಧೇ ರೀತಿ 10,544 ಪ್ರಕರಣಗಳಲ್ಲಿ ಆಧಾರ್-ಎನ್.ಪಿ.ಸಿ.ಐ ಮ್ಯಾಪಿಂಗ್ ಆಗದ ಕಾರಣ ಪರಿಹಾರ ಪಾವತಿ ಹಣ ಖಾತೆಗೆ ಜಮೆಯಾಗಿರುವುದಿಲ್ಲ. ಇಂತಹ ರೈತರು ಬ್ಯಾಂಕ್‌ಗೆ ಭೇಟಿ ನೀಡಬೇಕು ಎಂದು ಡಿ.ಸಿ. ತಿಳಿಸಿದ್ದಾರೆ.

ಇದಲ್ಲದೆ ಕೆ.ವೈ.ಸಿ. ಪೆಂಡಿAಗ್, ನಿಷ್ಕಿçÃಯ ಬ್ಯಾಂಕ್ ಖಾತೆ, ಖಾತೆ ರದ್ದು, ನಿಖರವಲ್ಲದ ಬ್ಯಾಂಕ್ ಖಾತೆ, ನಿಷ್ಕಿçÃಯ ಆಧಾರ್ ಸಂಖ್ಯೆ ಜೋಡಣೆದಂತಹ ಅನೇಕ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಪರಿಹಾರ ಹಣ ಪಡೆಯಲು ವಿಫಲರಾಗಿರುವ ರೈತರು ಕೂಡಲೆ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಪರಿಹಾರ ಹಣ ಪಡೆಯುವಂತೆ ಜಿಲ್ಲಾಧಿಕಾರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ.

Beleparihara not yet credited ಬೆಳೆ ಪರಿಹಾರ ಹಣ ಸಾಲದ ಖಾತೆಗೆ ಹೊಂದಾಣಿಕೆ ಮಾಡುವಂತಿಲ್ಲ: ಡಿ.ಸಿ. ಬಿ.ಪೌಜಿಯಾ ತರನ್ನುಮ್

ಪ್ರಸಕ್ತ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ 498.72 ಕೋಟಿ ರೂ. ಇನ್ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆಯಾಗಿದ್ದು, ಸದರಿ ಹಣವನ್ನು ರೈತರ ಸಾಲದ ಖಾತೆಗೆ ಹೊಂದಾಣಿಕೆ ಅಥವಾ ಜಮೆ ಮಾಡುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ತಮ್ಮ ಕಚೇರಿಯಿಂದ ಜಿಲ್ಲೆಯ ಬ್ಯಾಂಕರ್ಸ್ ಗಳೊಂದಿಗೆ ಗೂಗಲ್ ಮೀಟ್ ಆನ್ ಲೈನ್ ಸಭೆ ನಡೆಸಿದ ಅವರು, ಬೆಳೆ ಪರಿಹಾರ ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಬಾರದೆಂದು ಸ್ಪಷ್ಟವಾದ ಸೂಚನೆ ಬ್ಯಾಂಕ್ ಅಧಿಕಾರಿಗಳಿಗೆ ನೀಡಿದರು.

ಅತಿವೃಷ್ಟಿಯಿಂದ ಬೆಳೆ ಹಾನಿಯಾದ 3,26,183 ರೈತರಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್ ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 8,500 ರೂ. ಪರಿಹಾರ ಹಣ ಸೇರಿದಂತೆ ಒಟ್ಟಾರೆ ಜಿಲ್ಲೆಗೆ 498.72 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈಗಾಗಲೆ ರೈತರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. ಮೂಲಕ ಪಾವತಿಸಿದೆ ಎಂದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ರವಿಗೌಡ ಸೇರಿದಂತೆ ವಿವಿಧ ಬ್ಯಾಂಕಿನ ಅಧಿಕಾರಿಗಳು ಗೂಗಲ್ ಮೀಟ್ ನಲ್ಲಿ ಭಾಗಿಯಾಗಿದ್ದರು.


Previous Post Next Post