ದೇಶದಲ್ಲಿ ಬಜಾಜ್ ಪ್ಲಾಟಿನಾ 100 (Bajaj Platina 100), ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುವ ಪ್ರಯಾಣಿಕ ಮೋಟಾರ್‌ಸೈಕಲ್ ಆಗಿದೆ. ಇದು ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಪ್ಲಾಟಿನಾ 100' ಅತ್ಯುತ್ತಮ ಆಯ್ಕೆಯಾಗಲಿದೆ. ಬನ್ನಿ.. ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆಯೂ ಅಗ್ಗ (Low Price):
ಸೆಪ್ಟೆಂಬರ್ 22ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಆ ಬಳಿಕ, ನೂತನ 'ಬಜಾಜ್ ಪ್ಲಾಟಿನಾ 100' ಬೆಲೆಯೂ ಕಡಿಮೆಯಾಗಿದೆ. ಇದು ರೂ.65,850 (ಎಕ್ಸ್-ಶೋರೂಂ - ಕರ್ನಾಟಕ) ದರವನ್ನು ಪಡೆದಿದೆ. ರೂ.87,400 ವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.
ಸರಳ ವಿನ್ಯಾಸ & ಅತ್ಯುತ್ತಮವಾದ ಬಣ್ಣಗಳೊಂದಿಗೂ ಲಭ್ಯ (Simple Design & Available Good Colors):
ಈ ಬೈಕ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಟೈಲ್ ಲ್ಯಾಂಪ್‌ನ್ನು ಹೊಂದಿದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1255 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಬ್ಲ್ಯಾಕ್ & ರೆಡ್, ಬ್ಲ್ಯಾಕ್ & ಸಿಲ್ವರ್, ಬ್ಲ್ಯಾಕ್ & ಗೋಲ್ಡ್ ಹಾಗೂ ಬ್ಲ್ಯಾಕ್ & ಬ್ಲ್ಯೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.
ಸಾಟಿಯಿಲ್ಲದ ಕಾರ್ಯಕ್ಷಮತೆ (Unparalleled Performance):
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 102-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 7.9 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.34 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಭರ್ಜರಿ ಮೈಲೇಜ್ (Great Mileage):
ನೂತನ 'ಬಜಾಜ್ ಪ್ಲಾಟಿನಾ 100' ಮೋಟಾರ್‌ಸೈಕಲ್, ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. 75 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಒಟ್ಟು 11 ಲೀಟರ್ ಸಾಮರ್ಥ್ಯದ ಫುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ, ಸರಿ ಸುಮಾರು 825 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು.
ಆಕರ್ಷಕ ವೈಶಿಷ್ಟ್ಯಗಳು (Attractive Features):
ಈ ಬೈಕ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 17-ಇಂಚಿನ ಅಲಾಯ್ ವೀಲ್‌ಗಳು ಮತ್ತು ಹೆಚ್ಚು ಅತ್ಯಾಧುನಿಕವಾದ ಟೈರ್‌ಗಳನ್ನು ಪಡೆದಿದೆ. ಸೀಟ್ ಎತ್ತರವು 807 ಮಿ.ಮೀ ಇದೆ. ಸರಿ ಸುಮಾರು 117 ಕೆಜಿ ತೂಕವಿದೆ.
ಅತ್ಯುತ್ತಮವಾದ ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Excellent Suspension Setup & Braking System):
ಹೊಸ 'ಪ್ಲಾಟಿನಾ 100' ಬೈಕ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೂ ಗರಿಷ್ಠವಾದ ರಕ್ಷಣೆಯನ್ನು ಒದಗಿಸಬಲ್ಲದು. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸಿಬಿಎಸ್ (ಕಂಬೈನ್ಡ್ - ಬ್ರೇಕಿಂಗ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಒಟ್ಟಾರೆಯಾಗಿ, 'ಬಜಾಜ್ ಪ್ಲಾಟಿನಾ 100' ಪ್ರಯಾಣಿಕ ಮೋಟಾರ್‌ಸೈಕಲ್ ವಿಭಾಗದಲ್ಲಿ ಬೆಸ್ಟ್ ಚಾಯ್ಸ್ ಆಗಲಿದೆ. ಇದಕ್ಕೆ ಸಾಲು - ಸಾಲು ಪ್ರತಿಸ್ಪರ್ಧಿಗಳಿವೆ. ಬಹುಮುಖ್ಯವಾಗಿ ಹೀರೋ ಸ್ಪ್ಲೆಂಡರ್ ಪ್ಲಸ್, ಟಿವಿಎಸ್ ಸ್ಪೋರ್ಟ್, ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಹಾಗೂ ಹೋಂಡಾ ಶೈನ್ 100ಗಳು ಪ್ರಬಲವಾದ ಎದುರಾಳಿಯಾಗಿವೆ.