ರೈತರಿಗೆ ಗುಡ್ ನ್ಯೂಸ್ ನಿಮ್ಮ ಜಮೀನಿನ ಇ ಸ್ಕೇಚ್ ಮೊಬೈಲ್ ನಲ್ಲಿ ಹೀಗೆ ಪಡೆಯಿರಿ

Land digital e sketch : ರೈತಬಾಂಧವರಿಗೆ ಗುಡ್ ನ್ಯೂಸ್ ಇಲ್ಲಿದೆ. ರೈತರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ತಮ್ಮ ಜಮೀನಿನ ಇ ಸ್ಕೆಚ್ ನ್ನು ಪಡೆದುಕೊಳ್ಳಬಹುದು. ಹೌದು, ರೈತ ಮಿತ್ರರೇ ಕೇವಲ ಒಂದೇ ನಿಮಿಷದಲ್ಲಿ ನಿಮ್ಮ ಜಮೀನಿನ ಸರ್ವೆ ನಂಬರ್ ನಮೂದಿಸಿ ಇ ಸ್ಕೆಚ್ ಹಾಗೂ ಜಮೀನಿನ ಸ್ಕೆಚ್ ಮ್ಯಾಪನ್ನು ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.

Land digital e sketch ಜಮೀನಿನ ಇ ಸ್ಕೆಚ್ ಪಡೆಯುವುದು ಹೇಗೆ?

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಜಮೀನಿನ ಇ ಸ್ಕೆಚ್ ಪಡೆಯಲು ಈ

https://www.landrecords.karnataka.gov.in/service2/RTC.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ Bhoomi Online Land Records View ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ current Year, Old year, Mr, Mutation status, Khata Extract, Survey Document, Akarband, RTCwith Skecth, E chawadi ಹಾಗೂ Survey Sketch ಕಾಣಿಸುತ್ತದೆ. ಅಲ್ಲಿ ನೀವು Survey Sketch ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇನ್ನೊಂದು ಪೇಜ್ ತೆರೆದುಕೊಳ್ಳತ್ತದೆ. ಡಿಜಿಟೈಸ್ಡ್ ಸಮೀಕ್ಷೆ ನಕ್ಷೆ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅಲ್ಲಿ ಗ್ರಾಮ ಹುಡುಕಾಟ Village Search ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಊರನ್ನು ಟೈಪ್ ಮಾಡಬೇಕು. ಆಗ ಅದರ ಕೆಳಗಡೆ ನಿಮಗೆ ನಿಮ್ಮ ಊರು, ಹೋಬಳಿ, ತಾಲೂಕು ಹಾಗೂ ಜಿಲ್ಲೆ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಜಮೀನಿನ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ನಾಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು.

ಇದಾದ ನಂತರ ಹಿಸ್ಸಾ ನಂಬರ್ ನಮೂದಿಸಬೇಕು. ನಂತರ ಹುಡುಕು Search ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಮೂದಿಸಿದ ಸರ್ವೆ ನಂಬರಿನಲ್ಲಿ ಯಾರ ಯಾರ ಹೆಸರಿದೆ ಅವರ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಕೆಳಗಡೆ ನಿಮಗೆ ಜಮೀನಿನ ಸ್ಕೆಚ್ ಕಾಣಿಸುತ್ತದೆ. ನಿಮ್ಮ ಜಮೀನಿನ ಆಕಾರ ಕಾಣಿಸುತ್ತದೆ. ಇದನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು.

Land digital e sketch ಜಮೀನಿನ ಸ್ಕೆಚ್ ಮ್ಯಾಪ್ ಪಡೆಯುವುದು ಹೇಗೆ?

ನಿಮ್ಮ ಜಮೀನನ ಸ್ಕೆಚ್ ಮ್ಯಾಪ್ ಬೇಕಾದರೆ ನೀವು ಅಲ್ಲಿ ಕಾಣುವ View Sketch on Map ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಹೊಲ ಅಂದರೆ ಜಮೀನು ಕಾಣಿಸುತ್ತದೆ. ಜಮೀನಿನ ಆಕಾರ ಸಂಪೂರ್ಣವಾಗಿ ಕಲರ್ ನಲ್ಲಿ ಕಾಣಿಸುತ್ತದೆ. ಇದನ್ನು ನೀವು ಡೌನ್ಲೋಡ್ ಮಾಡಿಟ್ಟುಕೊಳ್ಳಬೇಕು. ಇದರಿಂದ ನಿಮ್ಮ ಜಮೀನು ಸ್ಪಷ್ಟವಾಗಿ ಕಾಣಿಸುತ್ತದೆ. ಒಮ್ಮೆ ಇದನ್ನು ಚೆಕ್ ಮಾಡಿ ನೋಡಿ ಖುಷಿ ಎನಿಸುತ್ತದೆ.

ಇದೇ ರೀತಿ ನಿಮಗೆ ಜಮೀನಿಗೆ ಸಂಬಂಧಿಸಿದ ಮಾಹಿತಿಗಳನ್ನು ನೀವು ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ಪಡೆದುಕೊಳ್ಳಬಹುದು. ಸರ್ಕಾರವು ಸಹ ರೈತರಿಗೆ ಸುಲಭವಾಗಿ ಜಮೀನಿನ ಮಾಹಿತಿ ಸಿಗಲೆಂದು ಆನ್ಲೈನ್ ವ್ಯವಸ್ಥೆಯನ್ನು ಮಾಡಿಕೊಟ್ಟಿದೆ. ಇತ್ತೀಚೆಗೆ ರೈತರು ಕೇವಲ ಮೊಬೈಲ್ ಬಳಸುವ ಜ್ಞಾನವಿದ್ದರೆ ಸಾಕು ಮನೆಯಲ್ಲಿಯೇ ಕುಳಿತು ಯಾರ ಸಹಾಯವೂ ಇಲ್ಲದೆ ತಮ್ಮ ಜಮೀನಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಕ್ಷಣಾರ್ಧದಲ್ಲಿ ಪಡೆದುಕೊಳ್ಳಬಹುದು.



Previous Post Next Post