ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ ಹಾಗೂ ದಾವಣಗೆರೆಯಂತಹ ನಗರಗಳಲ್ಲಿ ದಿನಬಳಕೆಗೆ ಬೈಕ್‌ಗಳು ತೀರಾ ಅನಿವಾರ್ಯವಾಗಿವೆ. ಇವುಗಳ ಮೇಲೆ ಆಫೀಸ್ ಕೆಲಸಕ್ಕೆ ತೆರಳುವವರೂ ಹೆಚ್ಚು ಅವಲಂಭಿತರಾಗಿದ್ದಾರೆ. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ಹೋಂಡಾ ಶೈನ್ 100' ಬೆಸ್ಟ್ ಚಾಯ್ಸ್ ಆಗಿದೆ. ಬನ್ನಿ.. ಈ ಬೈಕ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.
ಬೆಲೆ (Price):
ನೂತನ ಹೋಂಡಾ ಶೈನ್ 100 (Honda Shine 100) ಮೋಟಾರ್‌ಸೈಕಲ್, ಅಗ್ಗದ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.65,561 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ರೂ.80,000 ವರೆಗೆ ಆನ್-ರೋಡ್ ದರವಾಗುತ್ತದೆ. ಇಎಂಐ ಆಯ್ಕೆಯಲ್ಲಿ ಈ ಬೈಕ್‌ನ್ನು ಮನೆಗೆ ತಂದರೆ, 3 ವರ್ಷದ ಅವಧಿಗೆ ಮಾಸಿಕ ರೂ.2,300 ವರೆಗೆ ಮೊತ್ತವನ್ನು ಕಂತಿನ ರೂಪದಲ್ಲಿ ಪಾವತಿಸಬೇಕಾಗುತ್ತದೆ.
ವಿನ್ಯಾಸ & ಬಣ್ಣಗಳು (Design & Colors):
ಇದು ತುಂಬಾ ಸರಳವಾದ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಹೆಡ್‌ಲ್ಯಾಂಪ್, 'ಹೋಂಡಾ' ಬ್ಯಾಡ್ಜ್ ಹೊಂದಿರುವ ಫ್ಯುಯೆಲ್ ಟ್ಯಾಂಕ್ ಹಾಗೂ ಟೈಲ್ ಲೈಟ್‌ನ್ನು ಪಡೆದಿದೆ. ಆರೆಂಜ್ ವಿತ್ ಬ್ಲ್ಯಾಕ್, ಗ್ರೀನ್ ವಿತ್ ಬ್ಲ್ಯಾಕ್, ಗ್ರೇ ವಿತ್ ಬ್ಲ್ಯಾಕ್, ಬ್ಲ್ಯೂ ವಿತ್ ಬ್ಲ್ಯಾಕ್ ಹಾಗೂ ರೆಡ್ ವಿತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimensions):
ಈ ಬೈಕ್ ಸಾಕಷ್ಟು ದೊಡ್ಡ ಗಾತ್ರದಲ್ಲಿದೆ. 1,955 ಮಿ.ಮೀ ಉದ್ದ, 754 ಮಿ.ಮೀ ಅಗಲ ಹಾಗೂ 1,050 ಮಿ.ಮೀ ಎತ್ತರವಿದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,245 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 99 ಕೆಜಿ ತೂಕವಿದೆ.
ಕಾರ್ಯಕ್ಷಮತೆ (Performance):
ಹೊಸ 'ಹೋಂಡಾ ಶೈನ್ 100' ಮೋಟಾರ್‌ಸೈಕಲ್, ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 98.98 ಸಿಸಿ ಏರ್-ಕೋಲ್ಡ್, ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7,500 ಆರ್‌ಪಿಎಂನಲ್ಲಿ 7.38 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,000 ಆರ್‌ಪಿಎಂನಲ್ಲಿ 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಇದು ಉತ್ತಮವಾದ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 65 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 9 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ, ಸರಿ ಸುಮಾರು 585 ಮೀವರೆಗೆ ಮೈಲೇಜ್ ಕೊಡಬಲ್ಲದು. ಕನಿಷ್ಠ 2 ರಿಂದ 3 ವಾರಗಳವರೆಗೆ ಸುಲಭವಾಗಿ ಓಡಿಸಲು ಸಾಧ್ಯವಾಗಲಿದೆ.
ವೈಶಿಷ್ಟ್ಯಗಳು (Features):
ಈ ಬೈಕ್ ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೆನ್ಸರ್ ಹಾಗೂ ಸಿಂಗಲ್-ಪೀಸ್ ಸೀಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಅತ್ಯುತ್ತಮವಾದ ವೀಲ್‌ಗಳು & ಟೈರ್‌ಗಳನ್ನು ಒಳಗೊಂಡಿದೆ. ಸೀಟ್ ಎತ್ತರವು 786 ಮಿ.ಮೀ ಇದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 7.82 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ನೂತನ 'ಶೈನ್ 100' ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಡುಯಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಹಾಗೆಯೇ ಸಿಬಿಎಸ್ (ಕಾಂಬಿ - ಬ್ರೇಕ್ ಸಿಸ್ಟಮ್) ಹಾಗೂ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.