Kuri Shed Subsidy-ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣಕ್ಕೆ ರೂ 70,000 ಪಡೆಯುವುದು ಹೇಗೆ

By SVR Creations

ನರೇಗಾ (MGNREGA) ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವ ಜೊತೆಗೆ ಪಶುಸಂಗೋಪನೆಗೆ ಅಗತ್ಯವಾದ ಮೂಲಸೌಕರ್ಯ ನಿರ್ಮಾಣಕ್ಕೂ ಆರ್ಥಿಕ ನೆರವನ್ನು ಒದಗಿಸಲು ಕುರಿ ಶೆಡ್ ನಿರ್ಮಾಣಕ್ಕೆ(Sheep Farming) ಅರ್ಥಿಕ ನೆರವನ್ನು ಒದಗಿಸಲಾಗುತ್ತಿದ್ದು, ಆಸಕ್ತರು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅವಶ್ಯವಿರುವ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕುರಿ ಶೆಡ್(Kuri Sakanike Subsidy) ನಿರ್ಮಾಣಕ್ಕೆ ಎಷ್ಟು ಸಬ್ಸಿಡಿ ನೀಡಲಾಗುತ್ತದೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ? ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ಮು ಈ ಅಂಕಣದಲ್ಲಿ ತಿಳಿಸಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರರಿಗೂ ಮಾಹಿತಿ ತಿಳಿಸಲು ಸಹಕರಿಸಲು ಕೋರಿದೆ.

ಅನೇಕ ರೈತರಿಗೆ ನರೇಗಾ ಯೋಜನೆಯಡಿ ಕುರಿ ಸಾಕಾಣಿಕೆಗೆ ಅವಶ್ಯವಿರುವ ಶೆಡ್(Kuri Shed) ಅನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಜಿ ಸಲ್ಲಿಸವ ವಿಧಾನ ಸೇರಿದಂತೆ ಇನ್ನಿತರೆ ಅವಶ್ಯವಿರುವ ಮಾಹಿತಿಯ ಕೊರತೆ ಇರುವುದರಿಂದ ಇದರ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ.

Who Can Apply-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ನರೇಗಾ ಯೋಜನೆಯಡಿ ಕುರಿ ಶೆಡ್ ನಿರ್ಮಾಣಕ್ಕೆ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಸಲು ಇಲಾಖೆಯಿಂದ ನಿಗದಿಪಡಿಸಿರುವ ಅರ್ಹತಾ ಮಾನದಂಡಗಳ ಪಟ್ಟಿ ಈ ಕೆಳಗಿನಂತಿವೆ:

ಅರ್ಜಿದಾರ ಅಭ್ಯರ್ಥಿಗಳು ಗ್ರಾಮೀಣ ಪ್ರದೇಶದ ವಾಸಿಯಾಗಿರಬೇಕು.

ಜಾಬ್ ಕಾರ್ಡ ಅನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಬಿಪಿಎಲ್ ಕಾರ್ಡ ಮತ್ತು ಅರ್ಥಿಕವಾಗಿ ಹಿಂದುಳಿದ ವರ್ಗದ ನಾಗರಿಕರು ಅರ್ಜಿ ಸಲ್ಲಿಸಬಹುದು.

ಕುರಿ ಶೆಡ್ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.

Sheep Farming Shed Subsidy Amount-ಎಷ್ಟು ಸಹಾಯಧನ ನೀಡಲಾಗುತ್ತದೆ?

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ/ನರೇಗಾ ಅಡಿಯಲ್ಲಿ ಕುರಿ ಶೆಡ್ ನಿರ್ಮಾಣಕ್ಕೆ ಕೂಲಿ ವೆಚ್ಚ ಮತ್ತು ಸಮಾಗ್ರಿ ವೆಚ್ಚ ಸೇರಿ ಒಟ್ಟು ರೂ 70,000 ಆರ್ಥಿಕ ನೆರವನ್ನು ಪಡೆಯಬಹುದು.

How To Apply For Narega Kuri Shed-ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಕುರಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಸಹಾಯಧನವನ್ನು ಪಡೆಯಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ/ಹಳ್ಳಿ ವ್ಯಾಪ್ತಿಯ ಗ್ರಾಮ ಪಂಚಾಯತಿಯನ್ನು ಭೇಟಿ ಮಾಡಿ ಕ್ರಿಯಾ ಯೋಜನೆಯಲ್ಲಿ ಹೆಸರನ್ನು ಸೇರಿಸಿ ಅನುಮೋದನೆಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬೇಕು.

Required Documents For Application-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳ ಪಟ್ಟಿ:

ಗ್ರಾಮ ಪಂಚಾಯತಿಯನ್ನು ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳ ವಿವರ ಹೀಗಿದೆ:

ಅರ್ಜಿದಾರ ಅಭ್ಯರ್ಥಿಯ ಆಧಾರ್ ಕಾರ್ಡ/Adhar

ಜಾಬ್ ಕಾರ್ಡ/Job Card

ಪೋಟೋ/Photo

ಬ್ಯಾಂಕ್ ಪಾಸ್ ಬುಕ್/Bank Pass Book

ರೇಶನ್ ಕಾರ್ಡ/Ration Card

ಪಹಣಿ/ಉತಾರ್/RTC

ಪಶು ವೈದ್ಯಾಧಿಕಾರಿಯಿಂದ ದೃಡೀಕರಣ ಪ್ರಮಾಣ ಪತ್ರ(ಕ್ರಿಯಾ ಯೋಜನೆಯ ಅನುಮೋದನೆ ಬಳಿಕ)

Applicaion Process-ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ?

ಒಮ್ಮೆ ಅರ್ಜಿದಾರರು ಗ್ರಾಮ ಪಂಚಾಯಿತಿ ಕಚೇರಿಯನ್ನು ಭೇಟಿ ಮಾಡಿ ಕ್ರಿಯಾ ಯೋಜನೆಯಲ್ಲಿ ಹೆಸರನ್ನು ಸೇರ್ಪಡೆ ಮಾಡಲು ಅರ್ಜಿಯನ್ನು ಸಲ್ಲಿಸಿದ ಬಳಿಕ ಮುಂದಿನ ವಾರ್ಷಿಕ ವರ್ಷದಲ್ಲಿ ಕ್ರಿಯಾ ಯೋಜನೆಯಲ್ಲಿ ನಿಮ್ಮ ಹೆಸರನ್ನು ಸೇರ್ಪಡೆ ಮಾಡಿ ಅನುಮೋದನೆ ನೀಡಲಾಗುತ್ತದೆ ಕ್ರಿಯಾ ಯೋಜನೆಯು ಅನುಮೋದನೆಯಾಗಿ ನಿಮ್ಮ ಹೆಸರ ಸೇರ್ಪಡೆಗೊಂಡ ನಂತರ ಗ್ರಾಮ ಪಂಚಾಯಿತಿಯಿಂದ ಶೆಡ್ ನಿರ್ಮಾಣ ಮಾಡಿಕೊಳ್ಳಲು ಕಾಮಗಾರಿ ಪ್ರಾರಂಭಿಸಲು ಮಂಜೂರಿ ಆದೇಶವನ್ನು/Work Order ನೀಡಲಾಗುತ್ತದೆ. ನಂತರ ನೀವು ಶೆಡ್ ನಿರ್ಮಾಣವನ್ನು ಪ್ರಾರಂಭಿಸಬೇಕು.

ಹಂತ ಹಂತವಾಗಿ ಕಾಮಗಾರಿಯ ಜಿಪಿಎಸ್ ಪೋಟೋ ವನ್ನು ಗ್ರಾಮ ಪಂಚಾಯಿತಿಯಿಂದ ದಾಖಲಿಸಿ ನಿಮ್ಮ ಬ್ಯಾಂಕ್ ಖಾತೆಗೆ ಮತ್ತು ಜಾಬ್ ಕಾರ್ಡ್ ಹೊಂದಿರುವ ಕೂಲಿ ಕಾರ್ಮಿಕರ ಬ್ಯಾಂಕ್ ಖಾತೆಗೆ ಮಾರ್ಗಸೂಚಿಯನ್ವ ನಿಗದಿಪಡಿಸಿರುವ ಸಹಾಯಧನ ಹಣವನ್ನು ಜಮಾ ಮಾಡಲಾಗುತ್ತದೆ.

For More Information-ಹೆಚ್ಚಿನ ಮಾಹಿತಿಗಾಗಿ:

Narega Yojane Helpline-ಸಹಾಯವಾಣಿ:- 8277506000

Narega Website-ಅಧಿಕೃತ ವೆಬ್ಸೈಟ್:- Click Here