ರೈತರಿಗೆ ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

EV goods Vehicle subsidy : ಕರ್ನಾಟಕ ಒಕ್ಕಲಿಗರ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ 3 ಲಕ್ಷ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸಹಾಯಧನ ಪಡೆಯಲು ಸೇವಾಸಿಂದು ಪೋರ್ಟಲ್ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಾಕರು ತಿಳಿಸಿದ್ದಾರೆ.

ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಇ.ವಿ ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ 3 ಲಕ್ಷ ರೂಪಾಯಿಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುತ್ತದೆ. ಉಳಿಕೆ ಮೊತ್ತವನ್ನು ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ.

ನಗರ ಪ್ರದೇಶದ ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬುದಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಬಯಸುವವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ 3 ಲಕ್ಷ ರೂಪಾಯಿಗಳ ಒಳಗಿರಬೇಕು. ಅರ್ಜಿದಾರರ ವಯೋಮಿತಿ 21 ರಿಂದ 45 ವಯೋಮಾನದೊಳಗಿರಬೇಕು.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ -3 ಎ ನಲ್ಲಿ ಕ್ರಮ ಸಂಖ್ಯೆ 1ರ (ಎ) ಯಿಂದ (ಟಿ)ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ, ಸಮುದಾಯಕ್ಕೆ ಸೇರಿದ ಜನ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ದಲ್ಲಿ, ಗ್ರಾಮ ಒನ್ , ಗುಲ್ಬರ್ಗ ಒನ್, ಕರ್ನಾಟಕ ಒನ್ ಮೂಲಕ ಆನ್ಲೈನ್ ಮೂಲಕ ಮಾರ್ಚ್ 6 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ

https://kvcdc.karnataka.gov.in

ವೆಬ್ಸೈಟ್ ದಲ್ಲಿ ಅಥವಾ ನಿಗಮದ ದೂರವಾಣಿ ಸಂಖ್ಯೆ 080 29904350, 29904268 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಕಲಬುರಗಿ 585105 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 278635 ಗೆ ಸಂಪರ್ಕಿಸಲು ಕೋರಲಾಗಿದೆ.

EV goods Vehicle subsidy : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದಲೂ ಅರ್ಜಿ ಆಹ್ವಾನ

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ – 2 (ಎ) ರಲ್ಲಿ ಮಡಿವಾಳ ಮತ್ತು ಇದರ ಉಪಜಾತಿಗಳಾದ ಅಗಸ, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ರಾಜಕ,ಸಕಲ, ವನ್ನನ್, ವೆಲ್ಲುತೇಡನ್ ಮತ್ತು ಸಾಕಲವಾಡು ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 6 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ 080 22374832, 8050770004, ಅಥವಾ 8050770005 ಅಥವಾ ಕಲಬುರಗಿ ಡಿ. ದೇವರಾಜ ಅರಸು ಹಿಂದಳಿದ ವರ್ಗಗಳ ಅಭಿವೃದ್ಧಿ ನಿಗಮದ ನಿಯಮಿತದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 278635 ಗೆ ಸಂಪರ್ಕಿಸಲು ಕೋರಲಾಗಿದೆ.



Previous Post Next Post