ಹೌದು, 10 ಕುರಿ ಅಥವಾ ಮೇಕೆ ಮತ್ತು ಒಂದು ಟಗರು ಖರೀದಿಗೆ 67 ಸಾವಿರ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕುರಿ ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ಅನುಷ್ಠಾನಗೊಳ್ಳಲಿರುವ ಪರಿಶಿಷ್ಟ ಜಾತಿ ಯೋಜನೆ ಅ ಮತ್ತು ಗಿರಿಜನ ಉಪ ಯೋಜನೆ ಅಡಿ 10 + 01 ಕುರಿ / ಮೇಕೆ ಘಟಕಗಳ ವಿತರಣೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 60 ವಯೋಮಿತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಆರ್.ಡಿ. ಸಂಖ್ಯೆ ಹೊಂದಿರುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಎಫ್.ಆರ್.ಯು.ಟಿ.ಎಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿರಬೇಕು. ಅರ್ಹ ಫಲಾನುಭವಿಗಳನ್ನು ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಫಲಾನುಭವಿಗಳ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿಯನ್ನು ಮಾನಂದವಾಡಿ ರಸ್ತೆ, ಚಾಮುಂಡಿಪುರಂನಲ್ಲಿರುವ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಮಾರ್ಚ್ 10 ರಂದು ಸಂಜೆ 5 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲೆಯ ಆಯಾಯ ತಾಲೂಕು ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರು, ಪಶು ಇಲಾಖೆ ಅಥವಾ ಸಹಾಯಕ ನಿರ್ದೇಶಕರ ನಿಗಮದ ಕಚೇರಿಗೆ ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 98449 16969 ಮೂಲಕ ಸಂಪರ್ಕಿಸಬಹುದು ಎಂದು ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Goat unit subsidy get here ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಸಾಗಿದೆ.
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಫ ಯೋಜನೆ ಅಡಿಯಲ್ಲಿ (10 + 1 ) ಕುರಿ ಅಥವಾ ಮೇಕೆ ಘಟಕ ಸ್ಥಾಪಿಸಲು ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು, ಮತ್ತು ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡಿರುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಶೇಷ ಘಟಕ ಯೋಜನೆ 14 ಕುರಿ ಮೇಕೆ ಘಟಕ ಹಾಗೂ ಗಿರಿಜನ ಉಫ ಯೋಜನೆ 8 ಕುರಿ ಮೇಗೆ ಘಟಕಗಳನ್ನು ಸ್ಥಾಪಿಸಲು ಹಾವೇರಿ ಜಿಲ್ಲೆಗೆ ಒಟ್ಟು 22 ಗುರಿಗಳಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹಾವೇರಿ ಕಚೇರಿಯಿಂದ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್ 12 ರ ಸಂಜೆ 5 ಗಂಟೆಯೊಳಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹಾವೇರಿ ಕಚೇರಿ ಸಲ್ಲಿಸೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಕಚೇರಿ ಸಂಪರ್ಕಿಸಲು ಕೋರಲಾಗಿದೆ.
ಮಾರ್ಚ್ 4 ರಂದು ರೈತರಿಗೆ ತರಬೇತಿ
ಮೈಸೂರು ಜಿಲ್ಲೆಯ ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮಾರ್ಚ್ 4 ರಂದು ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಎಂಬ ವಿಷಯದ ಬಗ್ಗೆ ರೈತ, ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಿದೆ.
ತರಬೇತಿಯಲ್ಲಿ ಭಾಗವಹಿಸುವ ರೈತ, ರೈತ ಮಹಿಳೆಯರಿಗೆ ಊಟದ ವ್ಯವಸ್ಥೆಯನ್ನು ಒದಗಿಸಲಾಗುವುದು. ಆಸಕ್ತ ರೈತ, ರೈತ ಮಹಿಳೆಯರು ತಮ್ಮ ಹೆಸರನ್ನು ಈ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಮೊಬೈಲ್ ನಂಬರ್ 8277933116 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಬಹುದು.
ರೈತರು ತರಬೇತಿಗೆ ಬರುವಾಗ ಎಫ್ಐಡಿ ನಂಬರ್ , ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಝಿರಾಕ್ಸ್ ಪ್ರತಿಗಳನ್ನು ತಪ್ಪದೇ ತರುವುದು. ಮೈಸೂರು ಜಿಲ್ಲೆಯ 45 ರೈತ, ರೈತ ಮಹಿಳೆಯರಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಣಿ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.