ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Goods Vehicle purchase subsidy : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸಾಲ ಸೌಲಭ್ಯ ನೀಡಲು ಅರ್ಹ ಫಲಾನುಭವಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಆಹಾರ ವಾಹಿನಿ ( ಆಹಾರ್ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇ.ವಿ ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ 3 ಲಕ್ಷ ರೂಪಾಯಿಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುತ್ತದೆ. ಉಳಿಕೆ ಮೊತ್ತವನ್ನು ಬ್ಯಾಂಕುಗಳು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ.

ನಗರ ಪ್ರದೇಶದ ಕಲಬುರಗಿ ಉತ್ತರ ನಗರ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬುಹುದಾಗಿದೆ.

Goods Vehicle purchase subsidy ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ -1. 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ 3,00,000 ರೂಪಾಯಿಗಳ ಒಳಗಿರಬೇಕು. ಅರ್ಜಿದಾರರ ವಯೋಮಿತಿ 21 ರಿಂದ 45 ವರ್ಷದೊಳಗಿರಬೇಕು.

ಈ ಮೇಲ್ಕಂಡ ಯೋಜನೆಗಳಡಿ ಸೌಲಭ್ಯ ಪಡೆಯಲು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ -1, 2ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಅರ್ಹ ಹಿಂದುಳಿದ ವರ್ಗಗಳ ಅರ್ಜಿದಾರರು

https://sevasindhu.karnataka.gov.in

ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಗುಲ್ಬರ್ಗ ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ 2026 ರ ಮಾರ್ಚ್ 4 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ

https://dbcdc.karnataka.gov.in/

ನಿಗಮದ ವೆಬ್ಸೈಟ್ ನ್ನು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080 22374832 ಮತ್ತು 8050770004 ಅಥವಾ 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಕಲಬುರಗಿ 585105 ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 278635 ಗೆ ಸಂಪರ್ಕಿಸಲು ಕೋರಲಾಗಿದೆ.

Previous Post Next Post