Mobile canteen subsidy information : ನಿರುದ್ಯೋಗ ಯುವಕ ಯುವತಿಯರಿಗೆ ಆರ್ಥಿಕವಾಗಿ ಸ್ವಾಲಂಬನೆ ಜೀವನ ಸಾಗಿಸಲು ಸರ್ಕಾರವು 5 ಲಕ್ಷ ಸಬ್ಸಿಡಿ ನೀಡಿ ಮೊಬೈಲ್ ಕ್ಯಾಂಟೀನ್ ಆರಂಭಿಸಲು ಅರ್ಜಿ ಆಹ್ವಾನಿಸಿದೆ. ಹೌದು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರು ಯಾರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಪ್ರವಾಸಿ ತಾಣಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಗುಣಮಟ್ಟದ ಆಹಾರ ಸೇವೆಯನ್ನು ಒದಗಿಸಲು ಹಾಗೂ ಯುವಕರು ಸ್ವಾವಂಬಿಯಾಗಿ ಜೀವನ ಸಾಗಿಸಲು ಈ ಯೋಜನೆಯನ್ನು ಆರಂಭಿಸಿದೆ.
Mobile canteen subsidy information ಏನಿದು ಮೊಬೈಲ್ ಕ್ಯಾಂಟಿನ್ ಸಬ್ಸಿಡಿ ಯೋಜನೆ ?
ಕರ್ನಾಟಕ ಸರ್ಕಾರವು ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ವ್ಯವಹಾರವನ್ನು ಪ್ರಾರಂಭಿಸಲು ಸಹಾಯ ಮಾಡಲು ಮೊಬೈಲ್ ಕ್ಯಾಂಟೀನ್ ಸಬ್ಸಿಡಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯು ವ್ಯಕ್ತಿಗಳಿಗೆ ಸಂಚಾರಿ ಕ್ಯಾಂಟೀನ್ ವಾಹನಗಳನ್ನು ಖರೀದಿಸಲು ಮತ್ತು ನಿರ್ವಹಿಸಲು ಸಹಾಯಧನ ಒದಗಿಸುತ್ತದೆ. ಹೌದು, ಅರ್ಹ ಫಲಾನುಭವಿಗಳಇ 5 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.
ಈ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಸಬ್ಸಿಡಿ ಹಣ ನೀಡವುದರೊಂದಿಗೆ ಅವರಿಗೆ ಸೂಕ್ತ ತರಬೇತಿಯನ್ನು ಸಹ ನೀಡಲಾಗುವುದು. ಹೌದು, ಫಲಾನುಭವಿಗಳಿಗೆ ಆರು ತಿಂಗಳವರೆಗೆ ತರಬೇತಿ ನೀಡಲಾಗೂವುದು. ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಸಹ ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಖರೀದಿಸಲು ಘಟಕದ ವೆಚ್ಚ ಶೇ. 70 ರಷ್ಟು ಅಂದರೆ, 5 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು.
ಯಾರು ಯಾರು ಅರ್ಜಿ ಸಲ್ಲಿಸಬಹುದು ?
ಮೊಬೈಲ್ ಕ್ಯಾಂಟೀನ್ ಆರಂಭಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮೊಬೈಲ್ ಕ್ಯಾಂಟೀನ್ ಸಬ್ಸಿಡಿ ಹಣ ಪಡೆಯಲು ಅರ್ಜಿ ಸಲ್ಲಿಸಬಹುದು. ರಾಜ್ಯದ ಕೆಲವು ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 13 ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಈ ಯೋಜನೆಯ ಸಬ್ಸಿಡಿ ಹಣ ಹೇಗೆ ಪಡೆಯಬಹುದು ಎಂಬುದರ ಮಾಹಿತಿಗಾಗಿಜಿಲ್ಲಾ ಪ್ರವಾಸೋಧ್ಯಮ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು.
ಅರ್ಜಿ ಎಲ್ಲಿ ಸಲ್ಲಿಸಬೇಕು ?
ಆಯಾ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಪ್ರವಾಸೋಧ್ಯಮ ಇಲಾಖೆಯ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದುಕೊಳ್ಳಬೇಕು. ಅದರಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಅಲ್ಲೇ ಅರ್ಜಿ ಸಲ್ಲಿಸಬೇಕು.
ಮೈಸೂರು ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ
https://mysurutourism.in/notification/
ವೆಬ್ ಸೈಟ್ ನಲ್ಲಿ ಮಾಹಿತಿ ಪಡೆಯಬಹುದು. ಹಾಗೂ ಪ್ರವಾಸೋದ್ಯ ಇಲಾಖೆಯ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಈ ಯೋಜನೆಯು ಅನುದಾನ ಲಭ್ಯತೆಯ ಆಧಾರದ ಮೇಲೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಾತ್ರ ಅನ್ವಯಿಸುತ್ತದೆ. ಗಾಗಿ ಅಱ್ಜಿದಾರರು ತಮ್ಮ ಜಿಲ್ಲೆಯ ಪ್ರವಾಸೋಧ್ಯಮ ಇಲಾಖೆಯ ಕಚೇರಿಯನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ?
ಮೊಬೈಲ್ ಕ್ಯಾಂಟೀನ್ ಸಬ್ಸಿಡಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿರಬೇಕು. ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಗ್ರಾಮೀಣ ಪ್ರದೇಶದ ಅಭ್ಯ್ರಥಿಗಳು ವಾರ್ಶಿಕ ಆದಾಯ 1.50 ಲಕ್ಷದ ಒಳಗಿರಬೇಕು. ನಗರ ಪ್ರದೇಶದ ಅಭ್ಯರ್ಥಿಗಳ ಕುಟುಂಬದ ವಾರ್ಶಿಕ 2 ಲಕ್ಷ ರೂಪಾಯಿಯೊಳಗೆ ಇರಬೇಕು. ಈ ಹಿಂದೆ ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಪಡೆದಿರಬಾರದು.