ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಅಡಿಯಲ್ಲಿ ಕುಟುಂಬಗಳಿಗೆ ಸಬ್ಸಿಡಿ ದರದಲ್ಲಿ ಅಕ್ಕಿ, ಧಾನ್ಯಗಳು ಮತ್ತು ಇತರ ಪಡಿತರ ಪಡೆಯುವವರಿಗೆ ನೀಡಲಾಗುವ ಅಧಿಕೃತ ದಾಖಲೆಯಾಗಿದೆ. ಕರ್ನಾಟಕದಲ್ಲಿ ಈ ರೇಷನ್ ಕಾರ್ಡ್ ಅನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ನಿರ್ವಹಣೆ ಮಾಡುತ್ತದೆ. ಕರ್ನಾಟಕದಲ್ಲಿ ಬಹುತೇಕರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ನಭಾಗ್ಯ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹೀಗೆ ಮುಂತಾದ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ (BPL Card) ಅನ್ನು ಬಳಸಲಾಗುತ್ತದೆ. ಇತ್ತೀಚೆಗೆ ಬಿಪಿಎಲ್ ಕಾರ್ಡ್ ಸಂಬಂಧಿಸಿ, ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಪಿಎಲ್ ಕಾರ್ಡ್ ಬಳಕೆಯಲ್ಲಿ ಆಗುತ್ತಿರುವ ಅಕ್ರಮವನ್ನು ತಡೆಯುವ ನಿಟ್ಟಿನಲ್ಲಿ, ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಈ ಪರಿಣಾಮ ಈಗಾಗಲೇ ಲಕ್ಷಗಟ್ಟಲೆ ಕಾರ್ಡ್‌ಗಳು ರದ್ದಾಗಿದೆ.
ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್! ಅರ್ಹ ಕುಟುಂಬಗಳಿಗೆ ಮಾತ್ರ ಬಿಪಿಎಲ್ ಸೌಲಭ್ಯಗಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ. ಅದೇ ಕಾರಣದಿಂದ ಇತ್ತೀಚೆಗೆ ಸರ್ಕಾರ ತನ್ನ ಮಹತ್ವದ ಕಾರ್ಯ ಕೈಗೊಂಡಿದೆ. ರೇಷನ್ ಕಾರ್ಡ್ ಸಂಬಂಧಿಸಿ ಕರ್ನಾಟಕ ಸರ್ಕಾರ ಕಳೆದ ಕೆಲವು ತಿಂಗಳಿಂದ ಪರಿಷ್ಕರಣೆ ಕಾರ್ಯಾಚರಣೆ ಆರಂಭಿಸಿತ್ತು. ಇದೀಗ ಈ ಕಾರ್ಯವನ್ನು ಮತ್ತೆ ಆರಂಭಿಸಿದೆ. ಈ ಮೂಲಕ ಲಕ್ಷಗಟ್ಟಲೆ ಬಿಪಿಎಲ್ ಕಾರ್ಡ್ ರದ್ದಾಗಿದೆ ಎಂದು ವರದಿಯಾಗಿದೆ. ಅಯ್ಯಯ್ಯೋ, ಎಂದು ಬಿಪಿಎಲ್ ಕಾರ್ಡ್‌ದಾರರು.. ಸರ್ಕಾರದ ಆ ಒಂದು ನಿರ್ಧಾರದಿಂದಾಗಿ, ಇದೀಗ ಬಿಪಿಎಲ್ ಕಾರ್ಡ್‌ದಾರರು ಅಯ್ಯಯ್ಯೋ ಎಂಬಂತಾಗಿದೆ.
ಕಳೆದ 8 ತಿಂಗಳಿಂದ ಬಿಪಿಎಲ್ ಕಾರ್ಡ್ ಸಂಬಂಧಿಸಿ ಸರ್ಕಾರ ನಿರಂತರ ಪರಿಶೀಲನೆ ನಡೆಸುತ್ತಲೇ ಇತ್ತು. ಇದೀಗ ಸರ್ಕಾರ ಇದುವರೆಗೆ ಒಟ್ಟು 20 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಪಡಿಸಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೇ ಬಿಪಿಎಲ್‌ನಿಂದ ಎಪಿಎಲ್‌ಗೆ 14.5 ಲಕ್ಷ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡಿದೆ ಎನ್ನಲಾಗಿದೆ. ಇನ್ನೂ ಕೆಲವು ವರದಿಗಳು, ರಾಜ್ಯದಲ್ಲಿ 4.5 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿದೆ ಎಂದು ಹೇಳಲಾಗಿದೆ.
ಕೆಲವು ಮೂಲಗಳ ಪ್ರಕಾರ, ಒಟ್ಟು4.9 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿದ್ದು, ಇದರಲ್ಲಿ ಸುಮಾರು ಲಕ್ಷಾಂತರ ಫಲಾನುಭವಿಗಳನ್ನೂ ರದ್ದು ಪಡಿಸಲಾಗಿದೆ ಎನ್ನಲಾಗಿದೆ. ಆದ್ದರಿಂದ ಇದೀಗ ಹಲವರು ಮರು ಪರಿಶೀಲನೆಗೂ ಅರ್ಜಿ ಹಾಕಿದ್ದಾರೆ ಎನ್ನಲಾಗಿದೆ.
ಹಲವು ಜಿಲ್ಲೆಗಳಲ್ಲಿ ಇನ್ನೂ ಈ ಪರಿಷ್ಕರಣೆ ನಡೆಯುತ್ತಿದ್ದು, ಒಟ್ಟಾರೆಯಾಗಿ 8 ಲಕ್ಷದವರೆಗೆ ರದ್ದುಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಲಕ್ಷಗಟ್ಟಲೆ ಬಿಪಿಎಲ್ ಕಾರ್ಡ್‌ಗಳು ರದ್ದಾಗಿದೆ ಎನ್ನಲಾಗಿದೆ. ಬಿಪಿಎಲ್ ಕಾರ್ಡ್‌ಗಳು ರದ್ದಾಗಲು ಕಾರಣವೇನು? ಸರ್ಕಾರದ ನಿಯಮದ ಪ್ರಕಾರ, ಅನರ್ಹರೆಂದು ಗುರುತಿಸಲ್ಪಟ್ಟವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಪಡಿಸಿ, ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣಗಳು ಇಲ್ಲಿದೆ ಓದಿ. ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿಗಿಂತ ಹೆಚ್ಚಿರುವ ಕುಟುಂಬಗಳು ಆದಾಯ ತೆರಿಗೆ ಪಾವತಿದಾರರು ಸರ್ಕಾರಿ ನೌಕರರು ಸ್ವಂತ ಕಾರು ಹೊಂದಿರುವವರು ಜಿಎಸ್‌ಟಿ ತೆರಿಗೆ ಪಾವತಿದಾರರು 7 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು ನಕಲಿ ದಾಖಲೆಗಳನ್ನು ನೀಡಿ, ಬಿಪಿಎಲ್ ಕಾರ್ಡ್ ಪಡೆದಿರುವವರು. ಈ ಎಲ್ಲಾ ನಿಯಮಗಳನ್ನು ಮೀರಿ, ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದರೆ ಅಂಥವರ ಕಾರ್ಡ್‌ಗಳನ್ನು ರದ್ದುಗೊಳಿಸಿ, ಎಪಿಎಲ್‌ಗೆ ವರ್ಗಾಯಿಸಲಾಗುತ್ತದೆ ಎನ್ನಲಾಗಿದೆ.