ಎಂಬತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವ್ಯಕ್ಯ ಮಂದಿರ.ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಏಪ್ರಿಲ್ ಹದಿನೈದಕ್ಕೆ ಮಂದಿರದ ಲೋಕಾರ್ಪಣೆ.ಲೋಕಾರ್ಪಣೆಯ ನಂತರದ ಸಭಾ ಕಾರ್ಯಕ್ರಮದಲ್ಲಿ ಮೋದಿ, ಡಿಕೆಶಿ, ಕುಮಾರಸ್ವಾಮಿ ಭಾಗಿ
ಆದಿಚುಂಚನಗಿರಿ ಮಹಾಸಂಸ್ಥಾನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ (ಏಪ್ರಿಲ್ 15) ರಾಜ್ಯಕ್ಕೆ ಆಗಮಿಸಲಿದ್ದಾರೆ. ತಮಿಳುನಾಡು, ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಪ್ರಚಾರದ ಮಧ್ಯೆ, ಮೋದಿ, ಒಂದು ದಿನದ ರಾಜ್ಯ ಪ್ರವಾಸವನ್ನು ಪ್ರಧಾನಿ ಮಾಡಲಿದ್ದಾರೆ.
ಪ್ರಧಾನಿಯವರು ಮಠಕ್ಕೆ ಬರುತ್ತಿರುವ ವಿಚಾರದ ಬಗ್ಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ವಿವರಣೆಯನ್ನು ನೀಡಿದ್ದಾರೆ. ಸೌರಮಾನ ಯುಗಾದಿಯ ದಿನದಂದು ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ್ರು ಭಾಗವಹಿಸಲಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠ
ಬುಧವಾರ, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಠದ ಆವರಣದಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಸುಮಾರು ಎಂಬತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯವಾಗಿ ಈ ಮಂದಿರವನ್ನು ನಿರ್ಮಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ದೇವೇಗೌಡ್ರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕೂಡ ಭಾಗವಹಿಸಲಿದ್ದಾರೆ.
ಸೇನಾ ಹೆಲಿಕಾಪ್ಟರ್’ನಲ್ಲಿ ಆಗಮಿಸಲು ಪ್ರಧಾನಿ ಮೋದಿ
"ದೆಹಲಿಯಿಂದ ಬೆಳಗ್ಗೆ 7.30ರ ಸುಮಾರಿಗೆ ಹೊರಡುವ ಪ್ರಧಾನಿ ಮೋದಿ, ಸೇನಾ ಹೆಲಿಕಾಪ್ಟರ್’ನಲ್ಲಿ ಹತ್ತು ಗಂಟೆಗೆ ಮಠಕ್ಕೆ ಆಗಮಿಸಲಿದ್ದಾರೆ. ಗುರು ಗೋರಖನಾಥರು ತಪಸ್ಸು ಮಾಡಿದ್ದ ಉರಿಗದ್ದುಗೆಯ ದರ್ಶನವನ್ನು ಮಾಡಿ, ಕಾಲಭೈರವನಿಗೆ ಪೂಜೆ ಸಲ್ಲಿಸಲಿದ್ದಾರೆ. ಇದಾದ ನಂತರ ಪೀಠದ 71ನೇ ಯತಿ ಬಾಲಗಂಗಾಧರನಾಥ ಸ್ವಾಮೀಜಿವರ ಗದ್ದುಗೆಯುಳ್ಳ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿಗಳು ಲೋಕಾರ್ಪಣೆಗೊಳಿಸಲಿದ್ದಾರೆ" ಎಂದು ಪೀಠಾಧಿಪತಿ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.
ಪಹಲ್ಗಾಮ್ ಉಗ್ರರು ಎಲ್ಲಿ ಹೋದ್ರು ಅಂತಾ ಕೇಳಿದ್ರು, ಹೊಡೆದಾಕಿದ ಮೇಲೆ ಇವತ್ತೇ ಯಾಕೆ ಹೊಡೆದ್ರು ಅಂತಾರೆ! ಲೋಕಸಭೆಯಲ್ಲಿ ನರೇಂದ್ರ ಮೋದಿ ಕಿಡಿ
ಯಾವುದೇ ಬೇಡಿಕೆಯನ್ನು ಸಲ್ಲಿಸುವುದಿಲ್ಲ ಎಂದ ಶ್ರೀಗಳು
ವೇದಿಕೆ ಕಾರ್ಯಕ್ರಮದಲ್ಲಿ ಸೌಂದರ್ಯ ಲಹರಿ ಮತ್ತು ಶಿವಮಹಿಮ್ನಃ ಸ್ತೋತ್ರಂ ಗ್ರಂಧವನ್ನು ದೇವೇಗೌಡರು ಮತ್ತು ಪ್ರಧಾನಿಯವರು ಬಿಡುಗಡೆ ಮಾಡಲಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕೆ ನಮ್ಮ ವಿಶೇಷ ಆಹ್ವಾನದ ಮೇರೆಗೆ ಮೋದಿಯವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ, ಯಾವುದೇ ಬೇಡಿಕೆಗಳನ್ನು ನಾವು ಸಲ್ಲಿಸುವುದಿಲ್ಲ ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಮೋದಿಯವರ ಜೊತೆ, ಗೌಡ್ರು, ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಕೂಡಾ ಇರಲಿದ್ದಾರೆ ಎಂದು ಶ್ರೀಗಳು ಹೇಳಿದ್ದಾರೆ.
ಮೋದಿ ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷ ಜನ
ಬುಧವಾರ ಬೆಳಗ್ಗೆ ಒಂಬತ್ತು ಗಂಟೆಯಿಂದ ಪ್ರಧಾನಿಯವರು ಬಂದು ಹೋಗುವವರೆಗೆ ಕ್ಷೇತ್ರದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ. ಬಿಜಿಎಸ್ ಕ್ರೀಡಾಂಗಣದಲ್ಲಿ ನಾಳಿನ ಕಾರ್ಯಕ್ರಮ ನಡೆಯಲಿದ್ದು, ಒಂಬತ್ತು ಗಂಟೆಯೊಳಗೆ ಎಲ್ಲರೂ ಬರಬೇಕು ಎಂದು ಶ್ರೀಗಳು ಹೇಳಿದ್ದಾರೆ. ಸುಮಾರು ಒಂದೂವರೆ ಲಕ್ಷ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರು ಬಗೆಯ ಕಲ್ಲುಗಳನ್ನು ಬಳಸಿ, ಮಂದಿರವನ್ನು ನಿರ್ಮಿಸಲಾಗಿದೆ ಎಂದು ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ, ರಾಜ್ಯ ಮತ್ತು ಜಿಲ್ಲಾ ಪೊಲೀಸರು ವ್ಯಾಪಕ ಬಂದೋಬಸ್ತ್ ಅನ್ನು ಮಾಡಿದ್ದಾರೆ.