ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿ: ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ.ಅಂಬೇಡ್ಕರ್ ಹಾಗೂ ಇಂದಿರಾ ಗಾಂಧಿ ವಸತಿ ಪದವಿ ಪೂರ್ವ ಕಾಲೇಜುಗಳು ಸೇರಿದಂತೆ ಒಟ್ಟು 104 ಆಂಗ್ಲ ಮಾಧ್ಯಮ ವಸತಿ ಕಾಲೇಜುಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ತರಗತಿಗೆ 80 ಸೀಟುಗಳಂತೆ, ಒಟ್ಟು 8,320 ಸೀಟುಗಳು ಲಭ್ಯವಿವೆ. ವಿಜ್ಞಾನ ವಿಭಾಗದ ಪಿಸಿಎಂಬಿ ಮತ್ತು ಪಿಸಿಎಂಸಿ ಸಂಯೋಜನೆಗಳ ಕಾಂಬಿನೇಷನ್‍ಗಳು ಲಭ್ಯವಿದೆ. ಅರ್ಜಿಗಳನ್ನು ವೆಬ್‍ಸೈಟ್ ಮೂಲಕ www.kreis.karnataka.gov.in ಸಲ್ಲಿಸಬೇಕಾಗಿದ್ದು, ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಎ.29 ಕೊನೆಯ ದಿನವಾಗಿದೆ.

2026-27ನೇ ಸಾಲಿಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದು. ಎಸ್‍ಸಿ-ಎಸ್‍ಟಿ/ ಪ್ರವರ್ಗ-1 ಕುಟುಂಬದ ವಾರ್ಷಿಕ ಆದಾಯ ಮಿತಿ 2.50ಲಕ್ಷ ರೂ., ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಕುಟುಂಬದ ವಾರ್ಷಿಕ ಆದಾಯ ಮಿತಿ 1ಲಕ್ಷ ರೂ.ನಿಗದಿ ಪಡಿಸಲಾಗಿದೆ.

ತಾಂತ್ರಿಕ ಸಮಸ್ಯೆಗಳು ಅಥವಾ ಹೆಚ್ಚಿನ ವಿವರಗಳಿಗಾಗಿ ಹತ್ತಿರದ ವಸತಿ ಕಾಲೇಜಿನ ಪ್ರಾಂಶುಪಾಲರನ್ನು ಅಥವಾ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ 94820 00400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.




Previous Post Next Post