Vivo X300 FE:-ವಿವೋ ಕಂಪನಿಯು ನೂತನವಾಗಿ Vivo X300 FE ಸ್ಮಾರ್ಟ್‌ಫೋನ್ ಅನ್ನು ಇಂದು (ಮೇ 6 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಪ್ರೀಮಿಯಂ ಮಾದರಿಯಲ್ಲಿ ಲಗ್ಗೆ ಇಟ್ಟಿರುವ ಈ ಹೊಸ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್ 6,500mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸಪೋರ್ಟ್ ಒಳಗೊಂಡಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ರಚನೆ ಹೊಂದಿದೆ. ಅಲ್ಲದೇ ಇದು ಲಿಲಾಕ್ ಪರ್ಪಲ್, ನಾಯ್ರ್ ಬ್ಲ್ಯಾಕ್ ಮತ್ತು ಅರ್ಬನ್ ಆಲಿವ್ ಕಲರ್ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೆ ವಿವೋ X300 FE ಮೊಬೈಲ್‌ನ ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Vivo X300 FE ಬೆಲೆ ಹಾಗೂ ಲಭ್ಯತೆ
ನೂತನ ವಿವೋ X300 ಅಲ್ಟ್ರಾ ಸ್ಮಾರ್ಟ್‌ಫೋನ್ ಸಿಂಗಲ್ ಸ್ಟೋರೇಜ್ ವೇರಿಯಂಟ್ ಆಯ್ಕೆಗಳೊಂದಿಗೆ ಬಂದಿದೆ. ಈ ಮೊಬೈಲ್‌ನ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 79,999 ರೂ.ಗಳು ಆಗಿದೆ. ಹಾಗೆಯೇ 512GB ಸ್ಟೋರೇಜ್ ವೇರಿಯಂಟ್ ಬೆಲೆಯು 89,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಲಿಲಾಕ್ ಪರ್ಪಲ್, ನಾಯ್ರ್ ಬ್ಲ್ಯಾಕ್ ಮತ್ತು ಅರ್ಬನ್ ಆಲಿವ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು Vivo Zeiss Telephoto Extender Gen 2 ಲೆನ್ಸ್‌ನ ಬೆಲೆ 15,999 ರೂ.ಗಳು ಮತ್ತು ಟೆಲಿಫೋಟೋ ಎಕ್ಸ್‌ಟೆಂಡರ್ ಪರಿಕರಗಳ ಕಿಟ್‌ನ ಬೆಲೆ 3,999 ರೂ. ಆಗಿದೆ. ಇನ್ನು ಈ ಫೋನ್ ಮೇ 14 ರಂದು ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ವಿವೋ ಆನ್‌ಲೈನ್ ಸ್ಟೋರ್ ಮೂಲಕ ಭಾರತದಲ್ಲಿ ಮಾರಾಟಕ್ಕೆ ಬರಲಿದೆ.
ವಿವೋ X300 FE ಫೀಚರ್ಸ್ ಮಾಹಿತಿ
ಹೊಸ ವಿವೋ X300 FE ಮೊಬೈಲ್ 6.31 ಇಂಚಿನ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 94.38 ಪ್ರತಿಶತ ಸ್ಕ್ರೀನ್-ಟು-ಬಾಡಿ ಅನುಪಾತ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಇಲೈಟ್ ಜೆನ್ 5 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ OriginOS 6 ನಲ್ಲಿ ಕಾರ್ಯನಿರ್ವಹಿಸುತ್ತದೆ.ಹಾಗೆಯೇ ವಿವೋ X300 FE ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ವೈಲ್ಡ್ ಆಂಗಲ್ ಸೆನ್ಸಾರ್ ರಚನೆ ಹೊಂದಿದೆ. ತೃತೀಯ ಕ್ಯಾಮೆರಾವು 50 ಮೆಗಾಪಿಕ್ಸಲ್ ಟೆಲಿಫೋಟೋ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 6,500mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
0 Comments