Advertisement

Free Bus Pass: ವಿದ್ಯಾರ್ಥಿಗಳೇ, ಉಚಿತ ಬಸ್‌ ಪಾಸ್ ಬೇಕಾ? ಹಾಗಾದ್ರೆ ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಮಹತ್ವದ ಯೋಜನೆ ಘೋಷಣೆ ಮಾಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ನೀಡಲು ಮುಂದಾಗಿದೆ. ಫ್ರೀ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ. ಈ ಸೌಲಭ್ಯವನ್ನು ವಿಸ್ತರಿಸಲು ಸಚಿವ ಸಂಪುಟದ (Cabinet) ಅನುಮೋದನೆ ನೀಡಿದೆ. ತಾತ್ವಿಕ ಅನುಮೋದನೆ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ಗಳನ್ನು ವಿತರಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಷರತ್ತು ಹಾಕಿ‌ ಆದೇಶ ಹೊರಡಿಸಲಾಗಿದೆ.

ಇಂದಿನಿಂದ ಉಚಿತ ಬಸ್ ಪಾಸ್ ವಿತರಣೆ

ಸರ್ಕಾರದ ಆದೇಶದಂತೆ ರಾಜ್ಯದ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಇಂದಿನಿಂದ ಉಚಿತ ಬಸ್ ಪಾಸ್ ವಿತರಿಸಲಾಗುತ್ತಿದೆ. ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು (ವಿದ್ಯಾರ್ಥಿ ಪಾಸಿಗಾಗಿ ಶೈಕ್ಷಣಿಕ ವಿದ್ಯಾಭ್ಯಾಸದ ಅರ್ಹತಾ ಕಾಲಾವಧಿ ಇತ್ಯಾದಿ) ಮುಂದುವರೆಸಲಾಗಿದೆ ಎಂದು ತಿಳಿಸಿದೆ.

ಉಚಿತ ಬಸ್ಗಾಗಿ ಅರ್ಜಿ ಸಲ್ಲಿಸುವುದು ಹೇಗೆ?

ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಪಡೆಯಲು, ಈ ಹಿಂದಿನಂತೆ ಸರ್ಕಾರದ ಸೇವಾಸಿಂಧು ಪೋರ್ಟಲ್‌ನಲ್ಲಿ ಮತ್ತು ಶಾಲೆಗಳು ಸೇರಿದಂತೆ ಎಲ್ಲಿಂದಲಾದರೂ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಸೇವಾಸಿಂಧು ವೆಬ್ಸೈಟ್ ಲಿಂಕ್: 

https://sevasindhuservices.karnataka.gov.in/buspassservices/

ಇದರ ಜೊತೆಗೆ KSRTC ವ್ಯಾಪ್ತಿಯ 123 ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ.

ನಿಗಮದ ವೆಬ್‌ಸೈಟ್ ವಿಳಾಸ: https://ksrtc.karnataka.gov.in/studentpass

ಹಣ ಪಾವತಿಸಿದವರ ಹಣ 15 ದಿನಗಳಲ್ಲಿ ವಾಪಸ್

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಹಿನ್ನೆಲೆ ಈಗಾಗಲೇ ಬಸ್ ಪಾಸ್ಗಾಗಿ ಹಣ ಪಾವತಿಸಿದ ವಿದ್ಯಾರ್ಥಿಗಳಿಗೆ 15 ದಿನಗಳಲ್ಲಿ ಹಣ ವಾಪಸ್ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಬಗ್ಗೆ ಸಾರಿಗೆ ಇಲಾಖೆ ಕೆಲ ಷರತ್ತುಗಳನ್ನ ವಿಧಿಸಿ ಆದೇಶ ಹೊರಡಿಸಿದೆ. ರಾಜ್ಯ ರಸ್ತೆ ಸಾರಿಗೆ ನಿಗಮ / ಸಂಸ್ಥೆಗಳು ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು ದೂರದ ಮಿತಿ, ಪಾಸಿನ ಕಾಲಾವಧಿ ಇತ್ಯಾದಿ ಅನುಸರಿಸತಕ್ಕದ್ದು ಎಂದು ಆದೇಶಿಸಲಾಗಿದೆ.


Post a Comment

0 Comments