ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ಇಲಾಖೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಹಯೋಗದೊಂದಿಗೆ 2026ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
ಕರ್ನಾಟಕದಲ್ಲಿ 1600 ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಹಯೋಗದೊಂದಿಗೆ 2026ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಾನ್‌ಸ್ಟೇಬಲ್ (ಸಿಎರ್ಆ/ ಡಿಎಆರ್) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಜುಲೈ 22 ಕೊನೆ ದಿನವಾಗಿದೆ
ಲಿಖಿತ ಪರೀಕ್ಷೆ ಯಾವಾಗ?
ಮಿಕ್ಕುಳಿದ ವೃಂದದ 1,421 ಹಾಗೂ ಸ್ಥಳೀಯ ವೃಂದದ 179 ಹುದ್ದೆಗಳಿಗೆ ಪ್ರತ್ಯೇಕವಾದ ಅರ್ಜಿ ಆಹ್ವಾನಿಸಲಾಗಿದೆ. ಸೆ.6ರಂದು ಪ್ರತ್ಯೇಕವಾಗಿಯೇ ಲಿಖಿತಪರೀಕ್ಷೆ ನಡೆಸಲಾಗುವುದು ಎಂದುಎಂದುಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ವಿದ್ಯಾರ್ಹತೆ ಏನು?
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಉತ್ತರಿಸದೇ ಇರುವ ಪ್ರಶ್ನೆಗಳಿಗೆ ಐದನೇ ವೃತ್ತವನ್ನು ಶೇಡ್ ಮಾಡುವುದು ಕಡ್ಡಾಯ. ಇದಕ್ಕೆ ಹೆಚ್ಚುವರಿಯಾಗಿ ಐದು ನಿಮಿಷ ಸಮಯ ನೀಡಲಾಗುತ್ತದೆ. ಒಂದು ವೇಳೆ ಐದನೇ ವೃತ್ತವನ್ನು ಶೇಡ್ ಮಾಡದೇ ಇದ್ದಲ್ಲಿ ಪ್ರತಿ ಪ್ರಶ್ನೆಗೆ 0.25 ಅಂಕ ಕಡಿತಗೊಳಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ
ಅರ್ಜಿ ಸಲ್ಲಿಸೋದು ಹೇಗೆ?
ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಭೇಟಿ ನೀಡಿ. ನಿಮ್ಮ ಆದ್ಯತೆಗೆ ಅನುಗುಣವಾಗಿ KK ಅಥವಾ RPC ವಲಯದ ಸಕ್ರಿಯ ಲಿಂಕ್ ಅನ್ನು ಆಯ್ಕೆ ಮಾಡಿ. ಅಧಿಕೃತ ಪಿಡಿಎಫ್ (PDF) ಅಧಿಸೂಚನೆ ಡೌನ್‌ಲೋಡ್ ಮಾಡಿ, ನಿಮ್ಮ ಅರ್ಹತೆಯನ್ನು ಸಂಪೂರ್ಣವಾಗಿ ಓದಿ ಖಚಿತಪಡಿಸಿಕೊಳ್ಳಿ.
'Apply Online' ಲಿಂಕ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
ನಿಮ್ಮ ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ಪ್ರವರ್ಗಕ್ಕೆ ಅನುಗುಣವಾಗಿ ಆನ್‌ಲೈನ್ ಪೇಮೆಂಟ್ ಗೇಟ್‌ವೇ ಬಳಸಿ ಅರ್ಜಿ ಶುಲ್ಕವನ್ನು ಪಾವತಿಸಿ.
ಫಾರ್ಮ್ ಅನ್ನು ಸಬ್ಮಿಟ್ ಮಾಡುವ ಮುನ್ನ ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ, ನಂತರ ಪ್ರಿಂಟೌಟ್ ಪಡೆದು ಇಟ್ಟುಕೊಳ್ಳಿ.
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 22-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2026
0 Comments